ಚಾಮರಾಜನಗರ ಸೆ,4: ವಿದ್ಯಾರ್ಥಿನಿಯರು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಗೆ ಹೆಚ್ಚಿನ ಆಸಕ್ತಿ ವಹಿಸಬೇಕು ಎಂದು ಜೆಎಸ್ಎಸ್ ಮಹಿಳಾ ಕಾಲೇಜು ಪ್ರಾಂಶುಪಾಲ ಡಾ.ಎಂ.ಪ್ರಭು ಕರೆ ನೀಡಿದರು.
ನಗರದ ಜೋಡಿ ರಸ್ತೆಯಲ್ಲಿರುವ ಜೆಎಸ್ಎಸ್ ಮಹಿಳಾ ಕಾಲೇಜು ದೈಹಿಕ ಶಿಕ್ಷಣ ವಿಭಾಗ ಶುಕ್ರವಾರ ಏರ್ಪಡಿಸಿದ್ದ ರಾಷ್ಟ್ರೀಯ ಕ್ರೀಡಾ ದಿನಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಗದ್ಗುರು ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಆಶೀರ್ವಾದದೊಂದಿಗೆ ಶಿಕ್ಷಣ ಸಂಸ್ಥೆ ವಿದ್ಯಾರ್ಥಿಗಳು ಮುಖ್ಯ ವಾಹಿನಿಗೆ ಬರಲು ವಿದ್ಯಾಭ್ಯಾಸದ ಜೊತೆಗೆ ಸಾಂಸ್ಕೃತಿಕ ,ಕ್ರೀಡೆ, ಎನ್ಎಸ್ಎಸ್ ಹಾಗೂ ವಿವಿಧ ಚಟುವಟಿಕೆಗಳನ್ನು ಆಯೋಜನೆ ಮಾಡಿಕೊಂಡು ಬರುತ್ತಿದೆ ಎಂದು ತಿಳಿಸಿದರು.
ಜೆಎಸ್ಎಸ್ ಮಹಿಳಾ ಕಾಲೇಜು ದೈಹಿಕ ನಿರ್ದೇಶಕ ಎಸ್.ಉಮೇಶ್ ಮಾತನಾಡಿ, ಕ್ರೀಡಾಪಟುಗಳು ಸಮಯ ಪ್ರಜ್ಞೆ, ಶಿಸ್ತು, ಕಠಿಣ ನಿರಂತರ ಅಭ್ಯಾಸದಿಂದ ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಬಹುದು. ಈಗಾಗಲೇ ವಿದ್ಯಾರ್ಥಿನಿಯರು ಇತ್ತೀಚಿಗೆ ನಡೆದ ಗುಡ್ಡಗಾಡು ಓಟ ಹಾಗೂ ಜಿಲ್ಲಾಡಳಿತ ಏರ್ಪಡಿಸಿದ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿ ಕಾಲೇಜಿಗೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಚಾಮರಾಜನಗರ ವಿಶ್ವವಿದ್ಯಾಲಯ ಕ್ರೀಡಾ ಸಲಹೆ ಸಮಿತಿ ಸದಸ್ಯ ಜಿ.ಬಂಗಾರು, ಕಾಲೇಜಿನ ಕ್ರೀಡಾ ಸಮಿತಿ ಸದಸ್ಯ ಎಂ.ಯೋಗೇಶ್, ಮಮತಾ, ರಶ್ಮಿ, ತೇಜಸ್ವಿನಿ, ಕ್ರೀಡಾಕೂಟದಲ್ಲಿ ವಿಜೇತರಾದ ವಿದ್ಯಾರ್ಥಿನಿಗಳಾದ ಭುವನ ಆರ್.ಶೇಖರ್, ಇಂಚರ, ಎಸ್.ಜ್ಯೋತಿಕ, ಆರ್.ಎನ್.ಸೋನು, ಎನ್.ಪಾರ್ವತಿ, ಮಾಹಿನ್ ತೀರ್ದೋಸ್, ಸಿ.ಅಕ್ಷತಾ, ಸೌಂದರ್ಯ ಹಾಗೂ ಇತರರು ಹಾಜರಿದ್ದರು.