ಚಾಮರಾಜನಗರ: ಜಿಲ್ಲೆಯ ವಿಶ್ವಕರ್ಮ ಸಮುದಾಯದ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುತ್ತಿದ್ದು, ಮೇ 31 ರಂದು ರಾಜ್ಯಮಟ್ಟದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ವಿಶ್ವಕರ್ಮ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಮಂಜುನಾಥ್ ವಿಶ್ವಕರ್ಮ ತಿಳಿಸಿದರು.
ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಜ್ಯ ಅಧ್ಯಕ್ಷರಾದ ಕೆ.ಪಿ.ನಂಜುಂಡಿ ವಿಶ್ವಕರ್ಮ ಅವರ ನೇತೃತ್ವದಲ್ಲಿ ಹಾಗೂ ಸಮುದಾಯದ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಇದೇ ತಿಂಗಳ ಮೇ 31 ರಂದು ಭಾನುವಾರ ಮಧ್ಯಾಹ್ನ 12 ಗಂಟೆಗೆ ಬೆಂಗಳೂರಿನ ಟೌನ್ ಹಾಲ್ ನಲ್ಲಿರುವ ಪುಟ್ಟಣ್ಣಚೆಟ್ಟಿ ಪುರ ಭವನದಲ್ಲಿ ರಾಜ್ಯಮಟ್ಟದ ವಿಶ್ವಕರ್ಮ ಮಕ್ಕಳ ಪ್ರತಿಭ ಪುರಸ್ಕಾರ ಹಮ್ಮಿಕೊಳ್ಳಲಾಗಿದೆ ಎಂದು ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳಲ್ಲಿ ಶೇ. 75 ಕ್ಕಿಂತಲೂ ಹೆಚ್ಚು ಅಂಕಗಳನ್ನು ಪಡೆದು ಉತ್ತೀರ್ಣರಾದ ವಿಶ್ವಕರ್ಮ ಸಮುದಾಯದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಮಹಾಸಭಾದ ವತಿಯಿಂದ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಗುತ್ತದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸಮಾಜದ ವಾಟ್ಸಪ್ ಗ್ರೂಪ್ ಗಳಲ್ಲಿ ನೋಂದಣಿ ಅರ್ಜಿಯ ಪ್ರತಿಯನ್ನು ಹಾಕಲಾಗಿದೆ, ಅದನ್ನು ಡೌನ್ಲೋಡ್ ಮಾಡಿಕೊಂಡು ಅಂಕಪಟ್ಟಿ, ಟಿಸಿ ಅಥವಾ ಜಾತಿ ಪ್ರಮಾಣದ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಪ್ರತಿಭಾ ಪುರಸ್ಕಾರದ ನೊಂದಣಿ ಅರ್ಜಿಯನ್ನು ಸುಂದರ್ ಜಿ, ಬೆಂಗಳೂರು ಮೊಬೈಲ್ ಸಂಖ್ಯೆ 9886423935 ಇವರಿಗೆ ವಾಟ್ಸಾಪ್ ಮುಖಾಂತರ ಕಳಿಸಿಕೊಡಬೇಕೆಂದು ಮನವಿ ಮಾಡಿದರು.
ಈಗಾಗಲೇ 500 ವಿದ್ಯಾರ್ಥಿಗಳು ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಿದ್ದು, ಉಳಿದ 250 ಜನರು ಆದಷ್ಟು ಬೇಗ ಅರ್ಜಿಯನ್ನು ಸಲ್ಲಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಗೋಷ್ಠಿಯಲ್ಲಿ ವಿಶ್ವಕರ್ಮ ಮಹಾಸಭಾ ಜಿಲ್ಲಾ ಘಟಕದ ಉಪಾಧ್ಯಕ್ಷ ನಾಗೇಂದ್ರ, ಸೋಮವಾರಪೇಟೆ ಯುವ ಘಟಕದ ಅಧ್ಯಕ್ಷ ಸ್ವಾಮಿ, ಯಳಂದೂರು ತಾಲೂಕು ಅಧ್ಯಕ್ಷ ಎ.ನಾಗರಾಜು, ಚಂದಕವಾಡಿ ಹೋಬಳಿ ಅಧ್ಯಕ್ಷ ಕೆಂಪರಾಜು ಹಾಜರಿದ್ದರು.