ಶಿಕ್ಷಕರ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ನಂಜುಂಡಸ್ವಾಮಿ (ಪಾಪು) ಆಯ್ಕೆ

ಮಣಿಕಂಠ ಜನತಾ ರಾಯಭಾರಿ
0 Min Read

ಚಾಮರಾಜನಗರ: ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪ್ರಾಥಮಿಕ/ ಮಾಧ್ಯಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷರಾಗಿ ಶಿಕ್ಷಕ ಆರ್.ಹೆಚ್.ನಂಜುಂಡಸ್ವಾಮಿ(ಪಾಪು ) ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚಾಮರಾಜನಗರದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಮಾಡೆಲ್ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುಶ ಆರ್.ಹೆಚ್.ನಂಜುಂಡಸ್ವಾಮಿ(ಪಾಪು ) ಅವರನ್ನು ಸಂಘದ ರಾಜ್ಯಾಧ್ಯಕ್ಷರಾದ ಡಾ.ವಿ.ಟಿವೆಂಕಟೇಶಯ್ಯ ಅವರು ಬೆಂಗಳೂರಿನ ಸಂಘದ ಕಚೇರಿಯಲ್ಲಿ ಅವಿರೋಧವಾಗಿ ಆಯ್ಕೆ ಮಾಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಸಂಘದ ಹಿರಿಯ ಉಪಾಧ್ಯಕ್ಷರಾದ ದುಂಡಯ್ಯ, ಪ್ರಧಾನ ಕಾರ್ಯದರ್ಶಿ ಸುಮಿತ್ರಾ ಮಾರುತಿದುರ್ಗಿ, ಚಾಮರಾಜನಗರದ ಜಿಲ್ಲಾಧ್ಯಕ್ಷ ಜಿ.ಕೆಂಪರಾಜು ಉಪಸ್ಥಿತರಿದ್ದರು.

Share this Article
Leave a comment