ಶೂಟೌಟ್ ಹಿನ್ನೆಲೆ, ಅರಣ್ಯ ಇಲಾಖೆ ಕಚೇರಿಗಳಿಗೆ ಪೊಲೀಸ್ ಭದ್ರತೆ..!

ಮಣಿಕಂಠ ಜನತಾ ರಾಯಭಾರಿ
1 Min Read

ಚಾಮರಾಜನಗರ: ಮೂವರು ಬೇಟೆಗಾರರ ಶೂಟೌಟ್ ಪ್ರಕರಣದ ಹಿನ್ನೆಲೆಯಲ್ಲಿ ಕಾಡಂಚಿನ ಪ್ರದೇಶಗಳಲ್ಲಿರುವ ಅರಣ್ಯ ಇಲಾಖೆ ಕಚೇರಿಗಳು ಹಾಗೂ ಕಳ್ಳಬೇಟೆ ತಡೆ ಶಿಬಿರಗಳಿಗೆ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.

ಶಾಗ್ಯ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಶೂಟೌಟ್ ಗೆ ಮೂರು ಮೃತಪಟ್ಟ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಗ್ರಾಮಸ್ಥರು ಕುರಟ್ಟಿ ಹೊಸೂರು, ಜೆನ್ನೂರು ಬಳಿ ಇರುವ ಕಳ್ಳಬೇಟೆ ತಡೆ ಶಿಬಿರಗಳಿಗೆ ಹಾನಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೌದಳ್ಳಿ ಸೇರಿದಂತೆ ಕಾಡಂಚಿನಲ್ಲಿರುವ ಹಲವು ಅರಣ್ಯ ಇಲಾಖೆ ಕಚೇರಿಗಳಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದ.

ಅರಣ್ಯ ಇಲಾಖೆ ಜೀಪ್‌ಗೂ ಗ್ರಾಮಸ್ಥರಿಂದ ಕಲ್ಲು ತೂರಾಟ ನಡೆದಿರುವ ಮಾಹಿತಿ. ಘಟನೆಗಳ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕಚೇರಿಗಳು ಹಾಗೂ ಕಳ್ಳಬೇಟೆ ತಡೆ ಶಿಬಿರಗಳ ಬಳಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಹೆಚ್ಚುವರಿ ಪೊಲೀಸ್ ತುಕಡಿಗಳ ನಿಯೋಜನೆ. ಪ್ರಕರಣದ ಹಿನ್ನೆಲೆಯಲ್ಲಿ ಕಾಡಂಚಿನ ಪ್ರದೇಶಗಳಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟುನಿಟ್ಟಿನ ನಿಗಾ ವಹಿಸಿದ್ದಾರೆ.

Share this Article
Leave a comment