*ಅ.15ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ – ಡಾ.ಸಿ.ಎನ್.ರೇಣುಕಾದೇವಿ
ಚಾಮರಾಜನಗರ: ಸರ್ಕಾರಿ ಸೇವೆಯಲ್ಲಿ ಪ್ರಾಮಾಣಿಕತೆ, ಕರ್ತವ್ಯನಿಷ್ಠೆ, ದಕ್ಷತೆ ಹಾಗೂ ಜನಸೇವೆಯ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿರುವ ಅತ್ಯುತ್ತಮ ಸರ್ಕಾರಿ ನೌಕರರನ್ನು ಗುರುತಿಸಿ ಗೌರವಿಸುವ ಉದ್ದೇಶದಿಂದ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಕ್ಷರಿ ಅವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ವತಿಯಿಂದ ಸರ್ಕಾರಿ ನೌಕರರ ಸೇವಾ ಪ್ರಶಸ್ತಿ ನೀಡಲು ಮುಂದಾಗಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ನೀಡಲಾಗುವ ಸರ್ಕಾರಿ ನೌಕರರ ಸೇವಾ ಪ್ರಶಸ್ತಿಗೆ ಅರ್ಹ ಅಧಿಕಾರಿ-ನೌಕರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಕ್ಟೋಬರ್ 15, 2026 ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಕರ್ತವ್ಯನಿಷ್ಠೆ, ಗುಣಮಟ್ಟದ ಹಾಗೂ ಪ್ರಾಮಾಣಿಕ ಸೇವೆ, ಸಾರ್ವಜನಿಕರಿಗೆ ಸ್ಪಂದನೆ, ಸೇವಾವಧಿಯಲ್ಲಿನ ಗಮನಾರ್ಹ ಸಾಧನೆ, ಸಾರ್ವಜನಿಕ ಹಿತಕ್ಕಾಗಿ ಕೈಗೊಂಡ ವಿಶೇಷ ಕಾರ್ಯಗಳು, ಕಚೇರಿ ಕಾರ್ಯ ಕ್ರಮಕ್ಕೆ, ಸಮಯಪಾಲನೆ, ಹೊಸ ಆಲೋಚನೆ ಹಾಗೂ ಸರಳೀಕರಣದ ಪ್ರಯತ್ನಗಳು ಪ್ರಶಸ್ತಿಗೆ ಆಯ್ಕೆಯ ಮಾನದಂಡಗಳಾಗಿ ಪರಿಗಣಿಸಲಾಗುತ್ತದೆ.
ಇದರ ಜತೆಗೆ ದುರ್ಬಲ ವರ್ಗಗಳ ಬಗ್ಗೆ ಮಾನವೀಯ ಕಾಳಜಿ, ಸಹೋದ್ಯೋಗಿಗಳೊಂದಿಗೆ ಉತ್ತಮ ಸಮನ್ವಯ, ತಂಡದ ಮನೋಭಾವ ಹಾಗೂ ಇಲಾಖೆ ಮತ್ತು ಸರ್ಕಾರದ ಸೇವಾ ಗೌರವ ಹೆಚ್ಚಿಸುವಲ್ಲಿ ನೀಡಿರುವ ಕೊಡುಗೆಯನ್ನು ಪರಿಗಣಿಸಲಾಗುತ್ತದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾದ ಡಾ.ಸಿ.ಎನ್.ರೇಣುಕಾದೇವಿ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಯಾರು ಅರ್ಹರು?: ರಾಜ್ಯ ಸರ್ಕಾರದ ಗ್ರೂಪ್ ‘ಎ’, ‘ಬಿ’, ‘ಸಿ’ ಮತ್ತು ‘ಡಿ’ ವೃಂದದ ಖಾಯಂ ನೌಕರರು ಪ್ರಶಸ್ತಿಗೆ ನಾಮನಿರ್ದೇಶನಗೊಳ್ಳಲು ಅರ್ಹರಾಗಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಪ್ರತಿ ವರ್ಷ 200 ಸದಸ್ಯತ್ವ ಶುಲ್ಕ ಪಾವತಿಸಿರುವ ಜಿಲ್ಲೆ ಮತ್ತು ತಾಲೂಕುಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ-ನೌಕರರು ಅರ್ಹರಾಗಿರುತ್ತಾರೆ. ಸರ್ಕಾರಿ ಸೇವೆಗೆ ಸೇರ್ಪಡೆಗೊಂಡು ಕನಿಷ್ಠ ಐದು ವರ್ಷಗಳ ಸೇವೆ ಪೂರ್ಣಗೊಳಿಸಿರುವುದು ಕಡ್ಡಾಯವಾಗಿದೆ.
“ಅರ್ಹ ಅಧಿಕಾರಿ-ನೌಕರರು ಸ್ವತಃ ಪ್ರಸ್ತುತ ಅರ್ಜಿ ಸಲ್ಲಿಸಂತಿಲ್ಲ. ಇಲಾಖಾ ಮುಖ್ಯಸ್ಥರು, ಮೇಲಾಧಿಕಾರಿಗಳು, ಸಹೋದ್ಯೋಗಿಗಳು, ಸಂಘ-ಸಂಸ್ಥೆಗಳು, ಸಾರ್ವಜನಿಕರು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಮತ್ತು ತಾಲೂಕು ಶಾಖೆಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಅರ್ಹ ಪ್ರಶಸ್ತಿಗೆ ನಾಮನಿರ್ದೇಶನ ಮಾಡಬಹುದು.
ಆನ್ಲೈನ್ ಮೂಲಕ ಮಾತ್ರ ಅರ್ಜಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸೂಚಿಸಿರುವ POWERME DIA.INFO ಲಿಂಕ್ ಮೂಲಕ ಮಾತ್ರ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ನೇರವಾಗಿ ಯಾವುದೇ ಪ್ರಾಧಾನ್ಯತೆ, ವೈಯಕ್ತಿಕವಾಗಿ ಅಥವಾ ಬೇರೆ ಸಲ್ಲಿಸುವ ಸಂದರ್ಭದಲ್ಲಿ ಸರ್ಕಾರಿ ಇಲಾಖೆಯಲ್ಲಿ ಸಲ್ಲಿಸುವ ನಮೂನೆಯ ಸೇವೆ ಮತ್ತು ಸಾಧನೆಗಳ ವಿವರಗಳಿಗೆ ಆದ್ಯತೆ ನೀಡಲಾಗಿದೆ. ಅವನಿಯವ ಪುರಕ ಮಾಹಿತಿ, ದಾಖಲೆಗಳು ಹಾಗೂ ಭಾವಚಿತ್ರವನ್ನು ಆನ್ಲೈನ್ನಲ್ಲಿ ಅಪ್ ಲೋಡ್ ಮಾಡಬೇಕು. ಆಫ್ ಲೈನ್ ನಾಮನಿರ್ದೇಶನಗಳನ್ನು ಪರಿಗಣಿಸಲಾಗುವುದಿಲ್ಲ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15. ಅಕ್ಟೋಬರ್ 2026. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ಸಂಘದ ಕಾರ್ಯದರ್ಶಿ ಭರತ್ ಭೂಷಣ್-9880271620, ಖಜಾಂಚಿ ಶಿವಕುಮಾರಯ್ಯ-7259933775, ರಾಜ್ಯ ಪರಿಷತ್ ಸದಸ್ಯ ನಟರಾಜ್-9886166022, ಕಾರ್ಯಾಧ್ಯಕ್ಷ ಮಹದೇವಸ್ವಾಮಿ-8970490181 ಅವರನ್ನು ಸಂಪರ್ಕಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದೆ.