ಸ್ವಾತಂತ್ರ್ಯೋತ್ಸವ ದಿನವೇ ಶೂಟೌಟ್ ಗೆ ಮೂವರು ಬಲಿ 

ಮಣಿಕಂಠ ಜನತಾ ರಾಯಭಾರಿ
1 Min Read
{"remix_data":[],"remix_entry_point":"challenges","source_tags":["local"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{"transform":1,"effects":1},"is_sticker":false,"edited_since_last_sticker_save":true,"containsFTESticker":false}

ಚಾಮರಾಜನಗರ: ಹನೂರು ತಾಲೂಕಿನ ಶಾಗ್ಯ ಅರಣ್ಯ ವ್ಯಾಪ್ತಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದೇ ಅರಣ್ಯ ಇಲಾಖೆ ಸಿಬ್ಬಂದಿಗಳ ಶೂಟೌಟ್ ಗೆ ಮೂವರು ಬಲಿಯಾಗಿದ್ದಾರೆ.

ಹನೂರು ತಾಲೂಕಿನ ತೋಮಿಯಾರಪಾಳ್ಯ ಮೂಲದ ಆಂತೋನಿ, ಪೀಟರ್ ಮತ್ತು ಕುಮಾರ್ ಎಂದು ಹೇಳಲಾಗುತ್ತಿದೆ. ಹನೂರು ತಾಲೂಕಿನ ಶಾಗ್ಯ ಅರಣ್ಯ ವ್ಯಾಪ್ತಿಯಲ್ಲಿ ವನ್ಯಜೀವಿಗಳ ಬೇಟೆಗೆ ತೆರಳಿದ್ದ ತಂಡದವರು ಹಾಗೂ ಅರಣ್ಯ ಇಲಾಖೆಯ ಪೊಲೀಸರ ಜೊತೆಗೆ ಶನಿವಾರ ಬೆಳಗ್ಗೆ ಗುಂಡಿನ ಕಾಳಗ ನಡೆದಿದ್ದು, ಪೊಲೀಸರ ಶೂಟೌಟ್ ಗೆ ಮೂವರು ಮೃತಪಟ್ಟಿದ್ದಾರೆ.

ಶಾಗ್ಯ ಅರಣ್ಯ ವ್ಯಾಪ್ತಿಯಲ್ಲಿ ಕಳ್ಳಬೇಟೆ ನಡೆಯುವ ಮಾಹಿತಿಯ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಸಕಲ ಸಿದ್ಧತೆಯೊಂದಿಗೆ ತೆರಳಿದ್ದರು. ಈ ವೇಳೆ ಬೇಟೆಗಾರರು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳ ಗುಂಡಿಗೆ ಮೂವರು ಬಲಿಯಾಗಿದ್ದಾರೆ.

 

Share this Article
Leave a comment