ಚಾಮರಾಜನಗರ: ಕಾವೇರಿ ವನ್ಯಧಾಮದ ಶಾಗ್ಯ ಅರಣ್ಯ ಪ್ರದೇಶದಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ ನೀಡಿದ್ದಾರೆ.
ಹನೂರು ತಾಲೂಕಿನ ಶಾಗ್ಯ ಅರಣ್ಯ ಪ್ರದೇಶದಲ್ಲಿ ಗುಂಡಿನ ಚಕಾಮಕಿಯಲ್ಲಿ ಮೂವರು ಬೇಟೆಗಾರರು ಮೃತಪಟ್ಟಿದ್ದು, ಗ್ರಾಮದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ. ವನ್ಯಜೀವಿಗಳ ಬೇಟೆಗೆ ಕಾಡಿಗೆ ನುಗ್ಗಿದ್ದ ಬೇಟೆಗಾರರು ಹಾಗೂ ಅರಣ್ಯ ಸಿಬ್ಬಂದಿ ನಡುವೆ ಗುಂಡಿನ ಕಾಳಗ ನಡೆದಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ.
ಪ್ರಕರಣದ ಬಗ್ಗೆ ಸಿಎಂ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ್ದು, ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಿದ್ದಾರೆ. ನಮಗೆ ಬೆಳಗ್ಗೆ 5 ಗಂಟೆಯಿಂದಲೇ ಎಲ್ಲಾ ಮಾಹಿತಿ ಸಿಕ್ಕಿದೆ. ವಾಸ್ತವಾಂಶ ಕೂಡ ನನಗೆ ತಿಳಿದಿದೆ ಎಂದಿದ್ದಾರೆ.
ಮ್ಯಾಜಿಸ್ಟ್ರೇಟ್ ತನಿಖೆಗೆ ಸಿಎಂ ಆದೇಶ:
ಅರಣ್ಯ ಪ್ರದೇಶದಲ್ಲಿ ಇಂತಹ ಘಟನೆ ನಡೆದಿದ್ದು, ಬೇಟೆಗಾರರ ಬಳಿ ಇದ್ದ ಬಂದೂಕು ಸೇರಿ ಎಲ್ಲವನ್ನೂ ಸೀಜ್ ಮಾಡಲಾಗಿದೆ. ಒಬ್ಬರು ಸಾಗಾಣೆ ಮಾಡುವ ಸಮಯದಲ್ಲಿ ಮೃತಪಟ್ಟಿದ್ದಾರೆ. ಉಳಿದವರನ್ನೆಲ್ಲ ವಶಕ್ಕೆ ಪಡೆಯಲಾಗಿದೆ. ಮೃತದೇಹ ಪರಿಶೀಲನೆ ಕೂಡ ನಡಿಯುತ್ತಿದ್ದು, ಈ ಸಂಬಂಧ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ ನೀಡಿದ್ದಾರೆ.