ಹೊಂಗನೂರು ವ್ಯಾಪ್ತಿಯಲ್ಲಿ ಅಕ್ರಮ ಮಣ್ಣು ಗಣಿಗಾರಿಕೆ ಆರೋಪ 

ಮಣಿಕಂಠ ಜನತಾ ರಾಯಭಾರಿ
1 Min Read

ಚಾಮರಾಜನಗರ: ತಾಲೂಕಿನ ಹೊಂಗನೂರು, ಹನುಮನಪುರ ಹಾಗೂ ಬೆಟ್ಟಳ್ಳಿ ಗ್ರಾಮಗಳ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಣ್ಣು ಗಣಿಗಾರಿಕೆ ಮತ್ತು ಮಾರಾಟ ವ್ಯಾಪಕವಾಗಿ ನಡೆಯುತ್ತಿದೆ ಎಂದು ಮುಖಂಡ ಸಿ.ಧರಣೇಂದ್ರ ಆರೋಪಿಸಿದ್ದಾರೆ.

ಈ ಸಂಬಂಧ “ಜನತಾ ರಾಯಭಾರಿ” ಮಾಧ್ಯಮದೊಂದಿಗೆ ಅವರು ಮಾತನಾಡಿ, ಚಾಮರಾಜನಗರ ತಾಲ್ಲೂಕಿನ ಹೊಂಗನೂರು ಗ್ರಾಮದ ಗ್ರಾಮ ಆಡಳಿತಾಧಿಕಾರಿ ಕು.ಅನಿತಾ, ಹನುಮನಪುರ ಗ್ರಾಮದ ಗ್ರಾಮ ಆಡಳಿತಾಧಿಕಾರಿ ನಾಗೇಶ್, ಬೆಟ್ಟಳ್ಳಿ ಗ್ರಾಮದ ಗ್ರಾಮ ಆಡಳಿತಾಧಿಕಾರಿ ರಾಜೇಂದ್ರ ಇವರುಗಳ ವ್ಯಾಪ್ತಿಗೆ ಬರುವ ಸರ್ಕಾರಿ ಜಮೀನು ಹಾಗೂ ಖಾಸಗಿ ಜಮೀನುಗಳಲ್ಲಿ (ಹಿರಿಕೆರೆ ಅಕ್ಕಪಕ್ಕ) ಕಳೆದ ಕೆಲವು ತಿಂಗಳಿಂದ ವ್ಯಾಪಕವಾಗಿ ಅಕ್ರಮ ಮಣ್ಣು ತೆಗೆಯುವಿಕೆ ಮತ್ತು ಮಾರಾಟ ದಂದೆ ನಡೆಯುತ್ತಿದೆ ಎಂದು ದೂರಿದ್ದಾರೆ.

ಹೊಂಗನೂರು ಗ್ರಾಮ, ಹನುಮನಪುರ ಗ್ರಾಮ, ಬೆಟ್ಟಳ್ಳಿ ಗ್ರಾಮಗಳ ಸುತ್ತಮುತ್ತ ರಾತ್ರಿ ವೇಳೆ ಮತ್ತು ಮುಂಜಾನೆ ಜೆಸಿಬಿ, ಟಿಪ್ಪರ್, ಟ್ರ್ಯಾಕ್ಟರ್‌ಗಳ ಮೂಲಕ ಮಣ್ಣು ಸಾಗಿಸಲಾಗುತ್ತಿದೆ. ಇದರಿಂದ ಹಿರಿಕೆರೆ, ಕೆರೆ, ಕಾಲುವೆ, ರಸ್ತೆ ಹಾಳಾಗುತ್ತಿವೆ ಮತ್ತು ಸರ್ಕಾರಕ್ಕೆ ರಾಜಸ್ವ ನಷ್ಟ ಉಂಟಾಗುತ್ತಿದೆ. ಈ ಬಗ್ಗೆ ಗ್ರಾಮ ಆಡಳಿತಾಧಿಕಾರಿಗಳ ಗಮನಕ್ಕೆ ತಂದರೂ ಸಹ, ಗ್ರಾಮ ಸಹಾಯಕರ ಜೊತೆ ಸ್ಥಳ ಮಹಜರ್ ಮಾಡಿ, ಮೇಲಾಧಿಕಾರಿಗಳಿಗೆ ವರದಿ ಸಲ್ಲಿಸಿರುವುದಿಲ್ಲ ಎಂದು ಹೇಳಿದರು.

ಹೊಂಗನೂರು ಗ್ರಾಮದ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಣ್ಣು ಗಣಿಗಾರಿಕೆ ನಡೆಯುತ್ತಿರುವುದು ಕರ್ನಾಟಕ ಭೂ ಕಂದಾಯ ಕಾಯ್ದೆ 1964 ಸೆಕ್ಷನ್ 192ಎ ಮತ್ತು KCS (Conduct) Ruler ಉಲ್ಲಂಘನೆಯಾಗಿದೆ. ಆದ್ದರಿಂದ ಸ್ಥಳಕ್ಕೆ ಕಂದಾಯ ನಿರೀಕ್ಷಕರು ಮತ್ತು ಗಣಿ ಇಲಾಖೆ ಅಧಿಕಾರಿಗಳನ್ನು ಕಳುಹಿಸಿ ಜಂಟಿ ಪರಿಶೀಲನೆ ನಡೆಸಿ,ಮಹಜರ್ ಮಾಡಬೇಕು. ಅಕ್ರಮವಾಗಿ ಮಣ್ಣು ಸಾಗಾಣಿಕೆ ಮಾಡುವ ವಾಹನಗಳನ್ನು ವಶಪಡಿಸಿಕೊಂಡು, ಸಂಬಂಧಪಟ್ಟವರ ಮೇಲೆ ಕಾನೂನು ಕ್ರಮ ವಹಿಸಬೇಕು. ಕರ್ತವ್ಯ ಲೋಪ ಎಸಗಿರುವ ಹೊಂಗನೂರು ಳ, ಹನುಮನಪುರ, ಬೆಟ್ಟಳ್ಳಿ ಗ್ರಾಮಗಳ ಗ್ರಾಮ ಆಡಳಿತಾಧಿಕಾರಿಗಳು ಮತ್ತು ಗ್ರಾಮ ಸೇವಕರು ಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Share this Article
Leave a comment