ವಿಜಯ್ ಬೆಂಬಲಕ್ಕೆ ನಿಂತ ಕಾಂಗ್ರೆಸ್, 2 ಸಚಿವ ಸ್ಥಾನಕ್ಕೆ ಬೇಡಿಕೆ

ಮಣಿಕಂಠ ಜನತಾ ರಾಯಭಾರಿ
1 Min Read

ಬೆಂಗಳೂರು: ತಮಿಳುನಾಡಿನಲ್ಲಿ ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಭರ್ಜರಿ ಜಯ ಗಳಿಸಿದ್ದು, ಕಾಂಗ್ರೆಸ್‌ ವಿಜಯ್ ಗೆ ಬೆಂಬಲವನ್ನು ಸೂಚಿಸಿದೆ.

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ನಟ-ರಾಜಕಾರಣಿ ದಳಪತಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (TVK) ಪಕ್ಷವನ್ನು ಬೆಂಬಲಿಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದ್ದು, ಐದು ಸ್ಥಾನಗಳ ಬೆಂಬಲದೊಂದಿಗೆ ಹೊಸ ಸರ್ಕಾರ ರಚನೆಗೆ ವಿಜಯ್ ನೇತೃತ್ವದ ಟಿವಿಕೆ ಸಿದ್ಧವಾಗಿದೆ. ಈ ಮೈತ್ರಿಯೊಂದಿಗೆ ತಮಿಳು ನಾಡಿನಲ್ಲಿ ಹೊಸ ರಾಜಕೀಯ ಸಮೀಕರಣಗಳು ಸೃಷ್ಟಿಯಾಗಿದ್ದು, ವಿಜಯ್ ಅವರು ಶೀಘ್ರದಲ್ಲೇ ಸರ್ಕಾರ ರಚಿಸಲು ಹಕ್ಕು ಮಂಡಿಸಲಿದ್ದಾರೆ.

ರಾಹುಲ್ ಗಾಂಧಿ ಅವರು ಮೊದಲೇ ಟಿವಿಕೆ ಜೊತೆಗೆ ಬೆಂಬಲದ ಒಲವು ಹೊಂದಿದ್ದರು, ಆದರೆ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಆಶಯದಂತೆ ತಮಿಳುನಾಡು ಹಿರಿಯ ಕಾಂಗ್ರೆಸ್ ನಾಯಕರ ಆನ್‌ಲೈನ್ ಸಭೆಯ ನಂತರ ಈ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಸಂಖ್ಯಾಬಲದ ಪ್ರಕಾರ 234 ಸದಸ್ಯ ಬಲದ ವಿಧಾನಸಭೆಯಲ್ಲಿ ಬಹುಮತಕ್ಕೆ 118 ಸ್ಥಾನಗಳ ಅವಶ್ಯಕತೆಯಿದೆ. 108 ಸ್ಥಾನಗಳನ್ನು ಗೆದ್ದಿರುವ ಟಿವಿಕೆಗೆ ಬಹುಮತಕ್ಕೆ 10 ಸ್ಥಾನಗಳ ಕೊರತೆಯಿತ್ತು. ಐದು ಸ್ಥಾನಗಳನ್ನು ಹೊಂದಿರುವ ಕಾಂಗ್ರೆಸ್ ಬೆಂಬಲದೊಂದಿಗೆ ಟಿವಿಕೆ ಬಲ ಈಗ 113ಕ್ಕೆ ಏರಿದೆ. ಬಹುಮತ ಸಾಬೀತುಪಡಿಸಲು ಡಿಎಂಕೆ ಮೈತ್ರಿಕೂಟದಲ್ಲಿದ್ದ ಸಿಪಿಐ (2 ಸ್ಥಾನ), ಸಿಪಿಎಂ (2 ಸ್ಥಾನ) ಮತ್ತು ವಿಸಿಕೆ (2 ಸ್ಥಾನ) ಪಕ್ಷಗಳ ಬೆಂಬಲವನ್ನು ಟಿವಿಕೆ ನಿರೀಕ್ಷಿಸುತ್ತಿದೆ.

2 ಸಚಿವ ಸ್ಥಾನಕ್ಕೆ ಬೇಡಿಕೆ:
ಬಹುಮತಕ್ಕೆ ಕೊರತೆಯಿದ್ದ ಟಿವಿಕೆ ಜತೆ ಕಾಂಗ್ರೆಸ್ ‘ಕೈ’ ಜೋಡಿಸಿದ್ದು, 2 ಸಚಿವ ಸ್ಥಾನಗಳಿಗೆ ಬೇಡಿಕೆ ಇಟ್ಟಿದೆ. ಅದರಂತೆ ವಿಜಯ್ ಶೀಘ್ರದಲ್ಲೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅದರಂತೆ ಕಾಂಗ್ರೆಸ್ ನಾಯಕರಾದ ಗಿರೀಶ್ ಚೋಡಂಕರ್ ಮತ್ತು ಪ್ರವೀಣ್ ಚಕ್ರವರ್ತಿ ಅವರು ಟಿವಿಕೆ ನಾಯಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ ಎಂದು ಮೂಲಗಳ ಪ್ರಕಾರ ತಿಳಿದು ಬಂದಿದೆ.

Share this Article
Leave a comment