ಚಿಪ್ಪು ಹಂದಿಯ ಚಿಪ್ಪುಗಳನ್ನು ಸಾಗಿಸುತ್ತಿದ್ದವರ ಬಂಧನ 

ಮಣಿಕಂಠ ಜನತಾ ರಾಯಭಾರಿ
0 Min Read

ಚಾಮರಾಜನಗರ: ಮಂಗಳೂರು ಕದ್ರಿ ಉದ್ಯಾನದ ಬಳಿಯಲ್ಲಿ ಚಿಪ್ಪು ಹಂದಿಯ ಚಿಪ್ಪುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಮೂವರನ್ನು ಮಂಗಳವಾರ ಬಂಧಿಸಲಾಗಿದೆ.

ಬೆಂಗಳೂರು ದಕ್ಷಿಣದ ಎಚ್.ಆರ್.ಜಗದೀಶ್(50), ಕನಕಪುರದ ಸಿದ್ದು ನಾಯ್ಕ (38) ಹಾಗೂ ಬೆಂಗಳೂರು ಬನಶಂಕರಿಯ ನಿವಾಸಿ ಬಾಬು (48) ಬಂಧಿತ ಆರೋಪಿಗಳು. ಇವರು ಬಿಳಿ ಬಣ್ಣದ ಸ್ವಿಫ್ಟ್ ಕಾರಿನಲ್ಲಿ ಚಿಪ್ಪು ಹಂದಿಯ ಚಿಪ್ಪುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಮಂಗಳೂರು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿ, ಸುಮಾರು 5.200 ಕಿ.ಗ್ರಾಂ ಚಿಪ್ಪುಗಳನ್ನು ಹಾಗೂ 3 ಲಕ್ಷ ರೂ, ಮೌಲ್ಯದ ಕಾರನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ.

Share this Article
Leave a comment