ಶಿಕ್ಷಕರ ರಾಜಕೀಯದಿಂದ ಫಲಿತಾಂಶ ಹಿನ್ನಡೆ- ಶಾಸಕ ಸಿ.ಪುಟ್ಟರಂಗಶೆಟ್ಟಿ 

ಮಣಿಕಂಠ ಜನತಾ ರಾಯಭಾರಿ
1 Min Read
filter: 0; fileterIntensity: 0.0; filterMask: 0; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.49398148, 0.13588563);sceneMode: 3145728;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 42;

ಚಾಮರಾಜನಗರ: ಪ್ರಸ್ತುತ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳ ಶಿಕ್ಷಕರ ರಾಜಕೀಯ ಹೆಚ್ಚಾಗಿರುವುದರಿಂದ ಎಸ್ಎಸ್ಎಲ್ಸಿ ಫಲಿತಾಂಶದಲ್ಲಿ ಹಿನ್ನಡೆ ಅನುಭವಿಸಲು ಕಾರಣವಾಗಿದೆ ಎಂದು ಶಾಸಕ ಸಿ.ಪುಟ್ಟರಂಗಶೆಟ್ಟಿ ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ನಗರದ ನೂತನ ಕೆಡಿಪಿ ಸಭಾಂಗಣದಲ್ಲಿ ಶುಕ್ರವಾರ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಶಿಕ್ಷಕರು ಯಾವಾಗಲೂ ರಾಜಕೀಯ ಮಾಡಿಕೊಂಡು ನಿಂತಿರುತ್ತಾರೆ. ಕೆಲವು ಶಿಕ್ಷಕರಂತೂ ಬೆಂಗಳೂರಿನಲ್ಲೇ ಕಾಲ ಕಳೆಯುತ್ತಾರೆ. ಕೆಲವರು ಶಾಲೆಗಳಿಗೆ ಹೋಗುವುದೇ ಇಲ್ಲ. ಇದು ಚಾಮರಾಜನಗರದಲ್ಲಿ ಎಸ್ಎಸ್ಎಲ್ಸಿ ಫಲಿತಾಂಶ ಕಡಿಮೆಯಾಗಲು ಕಾರಣವಾಗಿದೆ ಎಂದು ಗರಂ ಆದರು.

ಸರ್ಕಾರಿ ಶಾಲೆಗಳಲ್ಲಿ ಹಲವಾರು ಮೇಧಾವಿ ಶಿಕ್ಷಕರು ಇದ್ದಾರೆ. ಅದನ್ನು ಸೂಕ್ತ ರೀತಿಯಲ್ಲಿ ಉಪಯೋಗಿಸಿಕೊಳ್ಳುವುದಿಲ್ಲ. ನಾನು ಸರ್ಕಾರಿ ಶಾಲೆಗಳಿಗೆ ಸಾಕಷ್ಟು ಅನುದಾನವನ್ನು ನೀಡಿದ್ದೇನೆ. ನೋಟ್ ಬುಕ್ ಹಾಗೂ ಇನ್ನಿತರೆ ಸೌಲಭ್ಯಗಳನ್ನು ಒದಗಿಸಿದ್ದೇನೆ. ಆದರೂ ಚಾಮರಾಜನಗರದಲ್ಲಿ ಫಲಿತಾಂಶ ಕುಸಿತ ಕಂಡಿದೆ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಈ ವೇಳೆ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಚಂದ್ರ ಪಾಟೀಲ್ ಪ್ರತಿಕ್ರಿಯಿಸಿ, ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುವ ಸಂದರ್ಭದಲ್ಲಿ ಚಾಮರಾಜನಗರ ತಾಲೂಕಿನ ಹೆಚ್ಚಿನ ಗ್ರಾಮಗಳಲ್ಲಿ ಜಾತ್ರೆ ಮತ್ತು ಹಬ್ಬಗಳು ನಡೆಯುವುದರಿಂದ ಇದು ಮಕ್ಕಳ ಮೇಲೆ ಪರಿಣಾಮ ಬೀರಿದೆ. ಶಾಲೆಗೆ ಸರಿಯಾಗಿ ಹೋಗದ ಶಿಕ್ಷಕರ ಮೇಲೆ ಅಗತ್ಯ ಕ್ರಮ ವಹಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಸಚಿವ ಕೆ.ವೆಂಕಟೇಶ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಯಾವ ಶಿಕ್ಷಕರು ಸರಿಯಾಗಿ ಬೋಧನೆ ಮಾಡುತ್ತಿಲ್ಲ, ಶಾಲೆಗಳಿಗೆ ಸರಿಯಾಗಿ ಬರುತ್ತಿಲ್ಲ ಅವರ ಮೇಲೆ ಅಗತ್ಯ ಕ್ರಮವನ್ನು ವಹಿಸಿ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

Share this Article
Leave a comment