ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಶತಾಯುಷಿಯಾಗಲಿ

ಮಣಿಕಂಠ ಜನತಾ ರಾಯಭಾರಿ
1 Min Read

ಚಾಮರಾಜನಗರ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಶತಾಯುಷಿಯಾಗಲಿ ಎಂದು ಕನ್ನಡಪರ ಸಂಘಟನೆಗಳ ಮುಖಂಡ ಚಾ.ರಂ.ಶ್ರೀನಿವಾಸ್ ಗೌಡ ಹೇಳಿದರು.

ನಗರದ ಶ್ರೀ ಚಾಮರಾಜೇಶ್ವರಸ್ವಾಮಿ ದೇವಸ್ಥಾನದ ಮುಂಭಾಗ ಜಮಾಯಿಸಿದ ಕನ್ನಡಪರ ಸಂಘಟನೆಗಳ ಮುಖಂಡರು ಇಡುಗಾಯಿ ಹೊಡೆದು, ಸಿಹಿ ಹಂಚುವ ಮೂಲಕ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರ ಹುಟ್ಟುಹಬ್ಬವನ್ನು ಆಚರಣೆ ಮಾಡಿದರು.

ಈ ಸಂದರ್ಭದಲ್ಲಿ ಚಾ.ರಂ.ಶ್ರೀನಿವಾಸ್ ಗೌಡ ಅವರು ಮಾತನಾಡಿ, ದೆಹಲಿಯ ಕೆಂಪುಕೋಟೆಯ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಿದ ಮೊಟ್ಟಮೊದಲ ಕನ್ನಡಿಗ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಮತ್ತೊಮ್ಮೆ ಲೋಕಸಭೆಯನ್ನು ಪ್ರತಿನಿಧಿಸಬೇಕು. ಅವರಿಗೆ ದೇವರು ಹೆಚ್ಚಿನ ಆಯಸ್ಸು, ಆರೋಗ್ಯವನ್ನು ಕರುಣಿಸಲಿ, ಅವರು ಶತಾಯುಷಿಯಾಗಲಿ ಎಂದು ಪ್ರಾರ್ಥಿಸಿದರು.

ದೇಶದ ಇತಿಹಾಸದಲ್ಲೇ ಎಚ್.ಡಿ.ದೇವೆಗೌಡ ಅವರು ಅತ್ಯುತ್ತಮ ಸಂಸದೀಯ ಪಟುವಾಗಿದ್ದಾರೆ. ಈ ಕಾರಣಕ್ಕೆ ಅವರು ನಿರಂತರವಾಗಿ ಲೋಕಸಭೆಗೆ ಆಯ್ಕೆಯಾಗುತ್ತಾ ಬಂದಿದ್ದಾರೆ. ಲೋಕಸಭೆ, ರಾಜ್ಯಸಭೆ ಹಾಗೂ ವಿಧಾನಸಭೆಯಲ್ಲಿ ತಮ್ಮದೇಯಾದ ಛಾಪನ್ನು ಮೂಡಿಸಿದ್ದಾರೆ. ಅವರು ಇರುವಂತದ್ದು ಕರ್ನಾಟಕವೇ ಹೆಮ್ಮೆಪಡುವಂತಹ ವಿಚಾರವಾಗಿದೆ ಎಂದರು‌.

ಈ ಸಂದರ್ಭದಲ್ಲಿ ಕನ್ನಡಪರ ಸಂಘಟನೆಯ ನಿಜಧ್ವನಿ ಗೋವಿಂದರಾಜು, ಮುಖಂಡರಾದ ಮಹದೇವಯ್ಯ ಹಾಗೂ ಇತರರು ಹಾಜರಿದ್ದರು.

Share this Article
Leave a comment