ಜಾನಪದ ಪರಂಜ್ಯೋತಿ ಪ್ರಶಸ್ತಿಗೆ ಡಾ.ಮೈಸೂರು ಗುರುರಾಜು ಆಯ್ಕೆ

ಮಣಿಕಂಠ ಜನತಾ ರಾಯಭಾರಿ
1 Min Read

ಚಾಮರಾಜನಗರ: ಕರ್ನಾಟಕ ಜಾನಪದ ಪರಿಷತ್ತು ಚಾಮರಾಜನಗರ ಜಿಲ್ಲಾ ಘಟಕ ಕೊಡಮಾಡುವ 2026 ನಗು ಸಾಲಿನ ಪ್ರಭುದೇವರಾಜೇಅರಸ್ ಜಾನಪದ ಪರಂಜ್ಯೋತಿ ಪ್ರಶಸ್ತಿಗೆ ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯರು ಹಾಗೂ ಪ್ರಸಿದ್ಧ ನೀಲಗಾರರಾದ ಡಾ.ಮೈಸೂರು ಗುರುರಾಜು ಆಯ್ಕೆ ಆಗಿದ್ದಾರೆ.

ಬೆಂಗಳೂರು ಕರ್ನಾಟಕ ಜಾನಪದ ಪರಿಷತ್ತು ಮತ್ತು ಕರ್ನಾಟಕ ಜಾನಪದ ಪರಿಷತ್ತು ಚಾಮರಾಜನಗರ ಜಿಲ್ಲಾ ಘಟಕ ಹಾಗೂ ಚಾಮರಾಜನಗರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸಹಯೋಗದಲ್ಲಿ ಮೇ 24ರಂದು ಭಾನುವಾರ ಬೆಳಿಗ್ಗೆ 10.30 ಗಂಟೆಗೆ ವರನಟ ಡಾ.ರಾಜಕುಮಾರ ಜಿಲ್ಲಾ ರಂಗಮಂದಿರದಲ್ಲಿ ಏರ್ಪಡಿಸಿರುವ ಚಾಮರಾಜನಗರ ಜಿಲ್ಲಾ ಜಾನಪದ ಉತ್ಸವ -2026 ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು.

ಪ್ರಶಸ್ತಿಯು 5000 ರೂಪಾಯಿ ನಗದು, ಪ್ರಶಸ್ತಿ ಫಲಕ ಒಳಗೊಂಡಿರುತ್ತದೆ. ಕರ್ನಾಟಕ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷರು ಹಾಗೂ ಹಂಪಿ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿಗಳಾದ ಪ್ರೊ. ಹಿ.ಚಿ. ಬೋರಲಿಂಗಯ್ಯ ಮತ್ತು ಮಾನಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ. ದತ್ತೇಶ್ ಕುಮಾರ್ ಪ್ರಶಸ್ತಿ ಪ್ರಧಾನ ನಡೆಸಿಕೊಡುವರು ಎಂದು ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ಸಿ.ಎಂ.ನರಸಿಂಹಮೂರ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Share this Article
Leave a comment