ಶೀಘ್ರದಲ್ಲೇ ಶಿಕ್ಷಕರ ನೇಮಕಾತಿ; ರಾಜ್ಯ ಸರ್ಕಾರ ಅಸ್ತು 

ಮಣಿಕಂಠ ಜನತಾ ರಾಯಭಾರಿ
1 Min Read

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವಿಷಯಗಳ ಕುರಿತು ನಡೆಸಿದ್ದು, ಶೀಘ್ರದಲ್ಲೇ ಶಿಕ್ಷಕರ ನೇಮಕಾತಿಗೆ ಅಸ್ತು ಎಂದಿದೆ.

ರಾಜ್ಯದ ಸರ್ಕಾರಿ ಶಾಲೆಗಳಿಗೆ 15 ಸಾವಿರ ಶಿಕ್ಷಕರನ್ನು ಭರ್ತಿ ಮಾಡುವ ಕುರಿತು ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ತಕ್ಷಣ ಸಲ್ಲಿಸಲು ಮುಖ್ಯಮಂತ್ರಿ ಅವರು ಸೂಚನೆ ನೀಡಿದ್ದಾರೆ. ಮುಂದುವರಿದು ಜೂ.1 ರಂದು ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಶಿವಮೊಗ್ಗದಲ್ಲಿ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ಒಂದು ಕೆಪಿಎಸ್ ಶಾಲೆಯಲ್ಲಿ 1200 ಮಕ್ಕಳಿಗೆ ಪ್ರವೇಶಾವಕಾಶ ಸಿಗಲಿದ್ದು, ಎಲ್.ಕೆ.ಜಿ ಯಿಂದ ಪಿಯುಸಿವರೆಗೆ ಒಂದೇ ಕಡೆ ಕನ್ನಡ ಮತ್ತು ಇಂಗ್ಲಿಷ್ ಮಾಧ್ಯಮದಲ್ಲಿ ಶಿಕ್ಷಣ ದೊರೆಯಲಿದೆ. ಮುಂದಿನ ಎರಡು ವರ್ಷಗಳಲ್ಲಿ ಎಲ್ಲಾ 800 ಶಾಲೆಗಳು ಸಂಪೂರ್ಣವಾಗಿ ಸಿದ್ಧವಾಗಬೇಕು. ಈ ವರ್ಷ 800 ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಆರಂಭಿಸಲು ಟೆಂಡರ್ ಪ್ರಕ್ರಿಯೆ ಆದಷ್ಟು ಬೇಗನೆ ಪ್ರಾರಂಭಿಸಲು ಮುಖ್ಯಮಂತ್ರಿ ಅವರು ಸೂಚಿಸಿದರು.

Share this Article
Leave a comment