ಬೆಂಗಳೂರು: ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಇಂದು (ಶುಕ್ರವಾರ) ಸಿದ್ದರಾಮಯ್ಯ ಅವರ ರಾಜೀನಾಮೆಯನ್ನು ಅಂಗೀಕರಿಸಿದ್ದು, ತಕ್ಷಣ ಜಾರಿಗೆ ಬರುವಂತೆ ಸಚಿವ ಸಂಪುಟವನ್ನು ವಿಸರ್ಜಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಲೋಕಭವನಕ್ಕೆ ತೆರಳಿ ಸಿಎಂ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದರು. ಪತ್ನಿಯ ಅನಾರೋಗ್ಯದ ಕಾರಣ ರಾಜ್ಯಪಾಲರು ಇಂದೋರ್ ಗೆ ತೆರಳಿದ್ದರಿಂದ ಅವರ ವಿಶೇಷ ಕಾರ್ಯದರ್ಶಿ ಪ್ರಭುಶಂಕರ್ ಅವರು ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದರು.
https://x.com/PTI_News/status/2060194787165413554?ref_src=twsrc%5Etfw%7Ctwcamp%5Etweetembed%7Ctwterm%5E2060194787165413554%7Ctwgr%5E588b066afdec1d9f9570cfd861159f5601142cbc%7Ctwcon%5Es1_c10&ref_url=https%3A%2F%2Fwww.prajavani.net%2Fnews%2Fkarnataka-news%2Fkarnataka-governor-accepts-siddaramaiah-resignation-4020202
ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಗುರುವಾರ ಸಂಜೆ ಬೆಂಗಳೂರಿಗೆ ವಾಪಸ್ ಆಗಿದ್ದು, ಮುಂಜಾನೆ ರಾಜೀನಾಮೆಯನ್ನು ಅಂಗೀಕಾರ ಮಾಡಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.