ಶಾಸಕ ಎ.ಆರ್.ಕೃಷ್ಣಮೂರ್ತಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಹೆಚ್ಚಿದ ಕೂಗು 

ಮಣಿಕಂಠ ಜನತಾ ರಾಯಭಾರಿ
1 Min Read

ಚಾಮರಾಜನಗರ: ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರಿಗೆ ಸಚಿವ ಸ್ಥಾನವನ್ನು ನೀಡಬೇಕು ಎಂದು ದಲಿತ ಸಂಘಟನೆಯ ಮುಖಂಡ ಹೊಂಗನೂರು ನಟರಾಜು ಒತ್ತಾಯಿಸಿದರು.

ಜಿಲ್ಲೆಯ ದಿ. ಬಿ. ರಾಚಯ್ಯ ರವರು ಕರ್ನಾಟಕದಲ್ಲಿ ಆಪಾರವಾದ ಕೊಡುಗೆಯನ್ನು ನೀಡಿದ್ದು, ಇವರು ಅರಣ್ಯ ಮಂತ್ರಿಯಾಗಿದ್ದಾಗ ಶೋಷಿತ ವರ್ಗಗಳಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಅಪಾರವಾದ ಕೊಡುಗೆ ನೀಡಿರುತ್ತಾರೆ. ಅವರ ಸುಪುತ್ರರಾದ ಎ.ಆರ್.ಕೃಷ್ಣಮೂರ್ತಿ ರವರು ಕೊಳ್ಳೇಗಾಲ ವಿಧಾನಸಭಾ ಸದಸ್ಯರಾಗಿದ್ದು, ಇವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

ಈ ಹಿಂದೆ ಎರಡು ಬಾರಿ ಸಂತೇಮರಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಎ.ಆರ್.ಕೃಷ್ಣಮೂರ್ತಿ ಅವರು ಡಾ. ಬಿ.ಆರ್. ಅಂಬೇಡ್ಕರ್ ನಿಗಮದ ಅಧ್ಯಕ್ಷರಾಗಿ ಶೋಷಿತವರ್ಗಗಳಿಗೆ ಅಪಾರ ಕೊಡುಗೆ ನೀಡಿರುತ್ತಾರೆ. ಪ್ರಸ್ತುತ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಹಾಲಿ ಶಾಸಕರಾಗಿದ್ದು, ಒಳ್ಳೆಯ ಕೆಲಸಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದರು.

ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಕ್ಷೇತ್ರಕ್ಕೆ ವಿಶೇಷ ಅನುದಾನವನ್ನು ತಂದು ಚಾಮರಾಜನಗರ ಜಿಲ್ಲೆ ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಒಂದುವೇಳೆ ಎ.ಆರ್. ಕೃಷ್ಣಮೂರ್ತಿ ರವರಿಗೆ ಸಚಿವ ಸ್ಥಾನ ಕೊಡದಿದ್ದ ಪಕ್ಷದಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಜಿಲ್ಲಾದ್ಯಂತ ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಹೊಂಗನೂರು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಮಹಾದೇವಸ್ವಾಮಿ ‌ಮಾತನಾಡಿ, ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಸಂದರ್ಭದಲ್ಲಿ ಚಾಮರಾಜನಗರದಿಂದ ಬೀದರ್ ವರೆಗೂ ಸಾಮುದಾಯದ ಜನರಿಗೆ ಅಪಾರವಾದ ಕೊಡುಗೆಯನ್ನು ನೀಡಿದ್ದಾರೆ. ಪ್ರಸ್ತುತ ಕೊಳ್ಳೇಗಾಲ ಕ್ಷೇತ್ರದಲ್ಲಿ ನಿರಂತರವಾಗಿ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದ್ದಾರೆ. ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಯ ದೃಷ್ಟಿಯಿಂದ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರಿಗೆ ಸಚಿವ ಸ್ಥಾನವನ್ನು ನೀಡಬೇಕು ಎಂದು ಆಗ್ರಹಿಸಿದರು.

ಗೋಷ್ಠಿಯಲ್ಲಿ ದಲಿತ ಸಂಘಟನೆಯ ನಾಗೇಶ್ ಭೋಗಾಪುರ, ಸೋಮಸುಂದರ್ ಮಲ್ಲಯ್ಯನಪುರ, ಮಹದೇವಯ್ಯ, ರಾಜು ಹಾಜರಿದ್ದರು.

Share this Article
Leave a comment