ಚಾಮರಾಜನಗರ: ಲೋಕಾಯುಕ್ತ ಪೊಲೀಸರು ಚಾಮರಾಜನಗರ ನಗರಸಭೆ ಮೇಲೆ ಮಂಗಳವಾರ ಸಂಜೆ ದಿಡೀರ್ ದಾಳಿ ನಡೆಸಿದ್ದು, ಇಬ್ಬರು ಅಧಿಕಾರಿಗಳು ಸಿಕ್ಕಿ ಬಿದ್ದಿದ್ದಾರೆ.
ನಗರಸಭೆಯ ಕಂದಾಯ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಸಾರ್ವಜನಿಕರ ಕೆಲಸಗಳನ್ನು ಮಾಡಿಕೊಡಲು ಲಂಚ ಸ್ವೀಕಾರ ಮಾಡುತ್ತಾರೆ ಎಂಬ ದೂರುಗಳು ಆಗಿಂದಾಗ್ಗೆ ಕೇಳಿ ಬರುತ್ತಲೇ ಇತ್ತು. ಹಲವಾರು ಸಾರ್ವಜನಿಕರು ಈ ಸಂಬಂಧ ಮೇಲಾಧಿಕಾರಿಗಳಿಗೆ ಮನವಿಯನ್ನು ಸಲ್ಲಿಸಿದ್ದರು.
ಲೋಕಾಯುಕ್ತ ಪೊಲೀಸರು ಮಂಗಳವಾರ ಸಂಜೆ ಕಂದಾಯ ವಿಭಾಗದ ಕಚೇರಿಗೆ ದಿಢೀರ್ ದಾಳಿ ನಡೆಸಿ, ಕಂದಾಯ ನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಹೇಮಂತ್ ಕುಮಾರ್ ಹಾಗೂ ಕಂದಾಯ ಅಧಿಕಾರಿ ಶಕಿಲ್ ಅಹಮ್ಮದ್ ಅವರ ಮೇಲೆ ದಾಳಿ ನಡೆಸಿ ಅವರ ಕಾರ್ಯವೈಖರಿಯನ್ನು ಪರಿಶೀಲಿಸಿದ್ದಾರೆ. ಸುಮಾರು 2 ತಾಸಿಗೂ ಹೆಚ್ಚು ಕಾಲ ಕಂದಾಯ ನಿ ಕಚೇರಿಯಲ್ಲಿ ಸುದೀರ್ಘವಾಗಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.