ಉಮ್ಮಳದ ಸಾಹಿತಿಗೆ ಒಲಿದ ಶ್ರೀನಾಲ್ವಡಿ ಕೃಷ್ಣರಾಜ್ ಒಡೆಯರ್ ಪ್ರಶಸ್ತಿ 

ಮಣಿಕಂಠ ಜನತಾ ರಾಯಭಾರಿ
1 Min Read

ಚಾಮರಾಜನಗರ: “ಮನಸ್ಸು”, “ಭೃಂಗಚೈತ್ರ”, “ಉಮ್ಮಳ” ಹಾಗೂ ಇನ್ನಿತರೆ ಹತ್ತಾರು ಕೃತಿಗಳನ್ನು ನೀಡಿದ ನೆಲಮೂಲದ ಸಾಹಿತಿ ಬಿಸಲವಾಡಿ ಸೋಮಶೇಖರ್ ಅವರು 2026 ನೇ ಸಾಲಿನ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಯು ಕರ್ನಾಟಕ ಸರ್ಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾಡಳಿತದಿಂದ ನೀಡಲಾಗುವ ಅತ್ಯುನ್ನತ ರಾಜ್ಯಮಟ್ಟದ ಪ್ರಶಸ್ತಿಯಾಗಿದೆ. ಮೈಸೂರು ಸಂಸ್ಥಾನದ ಅಭಿವೃದ್ಧಿ, ಸಾಮಾಜಿಕ ನ್ಯಾಯ ಮತ್ತು ಕಲ್ಯಾಣ ಕಾರ್ಯಗಳಿಗೆ ತಮ್ಮನ್ನೇ ಮುಡಿಪಾಗಿಟ್ಟಿದ್ದ ಮಹಾರಾಜ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಸ್ಮರಣಾರ್ಥ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.

ಚಾಮರಾಜನಗರದ ಸಾಹಿತಿ ಮತ್ತು ಚಿಂತಕ ಬಿಸಲವಾಡಿ ಸೋಮಶೇಖರ್ ಅವರು ಸಾಹಿತ್ಯ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ತತ್ವ, ಆದರ್ಶ, ಚಿಂತನೆಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಸಮಾಜದಲ್ಲಿ ಸಮಾನತೆ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಪ್ರಚುರಪಡಿಸುತ್ತಿರುವ ಸೇವೆಯನ್ನು ಗುರುತಿಸಿ 2026ನೇ ಸಾಲಿನ ರಾಜಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಬಿಸಲವಾಡಿ ಸೋಮಶೇಖರ್ ಅವರು ‘ಮನಸ್ಸು’, ‘ಭೃಂಗಚೈತ್ರಾ’ ಮತ್ತು ‘ಅವ್ವ’ ಕವನ ಸಂಕಲನ, ಉಮ್ಮಳ ಎಂಬ ಕಥಾ ಸಂಕಲನ, ಡಾ.ಬಿ.ಆರ್.ಅಂಬೇಡ್ಕರ್ ಕುರಿತಾದ ಪುಸ್ತಕಗಳನ್ನು ಒಳಗೊಂಡಂತೆ 30 ಕ್ಕಿಂತಲೂ ಹೆಚ್ಚು ಪುಸ್ತಕಗಳನ್ನು ಸಂಪಾದಿಸಿ, ರಚನೆ ಮಾಡಿದ್ದಾರೆ. ಚಾಮರಾಜನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಅಪಾರವಾದ ಸೇವೆಯನ್ನು ಸಲ್ಲಿಸಿದ್ದಾರೆ. ಅವರ ಸೇವೆಯನ್ನು ಗುರುತಿಸಿ ರಾಜರ್ಷಿ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ದೊರೆತಿರುವುದಕ್ಕೆ ಹಲವಾರು ಸಂಘ-ಸಂಸ್ಥೆಗಳ ಮುಖಂಡರು ಹಾಗೂ ಹಿತೈಷಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ನಾಳೆ(ಬುಧವಾರ) ಮೈಸೂರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ.

 

Share this Article
Leave a comment