ಅಧಿಕಾರ ಬೇಕಾದವರು ಡಿಕೆಶಿ ಜೊತೆ ಹೋಗಿ- ಬಿ.ಕೆ.ಹರಿಪ್ರಸಾದ್ ಖಡಕ್ ಸಂದೇಶ 

ಮಣಿಕಂಠ ಜನತಾ ರಾಯಭಾರಿ
1 Min Read

ಚಾಮರಾಜನಗರ: ಕೆಪಿಸಿಸಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಬಿ.ಕೆ. ಹರಿಪ್ರಸಾದ್ ಅವರು ಸಚಿವ ಸ್ಥಾನ ವಂಚಿತರು ಮತ್ತು ಅಧಿಕಾರ ಆಕಾಂಕ್ಷಿಗಳಿಗೆ ಖಡಕ್ ಸಂದೇಶ ರವಾನಿಸಿದ್ದಾರೆ.

“ಯಾರಿಗೆ ಅಧಿಕಾರ ಮತ್ತು ಸ್ಥಾನಮಾನ ಬೇಕೋ ಅವರು ಡಿ.ಕೆ. ಶಿವಕುಮಾರ್ ಜೊತೆಗೆ ಹೋಗಿ, ಪಕ್ಷವನ್ನು ಸದೃಢವಾಗಿ ಬೆಳೆಸಬೇಕು ಅನ್ನೋರು ನಮ್ಮ ಜೊತೆಗೆ ಬನ್ನಿ” ಎಂಬ ಮಾರ್ಮಿಕ ಸಂದೇಶವನ್ನು ಕಾಂಗ್ರೆಸ್ ಕಾರ್ಯಕರ್ತರಿಗೆ ತಿಳಿಸಿದ್ದಾರೆ. ಸರ್ಕಾರದಲ್ಲಿ ಈಗಾಗಲೇ ಬೇರೆ ಬೇರೆ ಕೆಲಸ ಮಾಡಿದವರು ಈಗ ಪಕ್ಷದ ಸಂಘಟನೆಗೆ ಒತ್ತು ನೀಡಬೇಕು. ನಾವೆಲ್ಲರೂ ಸೇರಿ ರಾಹುಲ್ ಗಾಂಧಿ ಅವರ ಹೋರಾಟಕ್ಕೆ ಶಕ್ತಿ ತುಂಬುವ ಕೆಲಸ ಮಾಡಬೇಕಿದೆ ಎಂದು ಹೇಳಿದರು.

ನಾನು ಕಾಂಗ್ರೆಸ್ ಪಕ್ಷದ ವ್ಯಕ್ತಿ, ಸರ್ಕಾರದ ವ್ಯಕ್ತಿಯಲ್ಲ. 53 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿದ್ದುಕೊಂಡು ಎಲ್ಲಾ ಹಂತಗಳಲ್ಲಿ ಕೆಲಸ ಮಾಡುತ್ತಾ ವಿವಿಧ ಹುದ್ದೆಗಳನ್ನು ನಿಭಾಯಿಸಿದ್ದೇನೆ. ಸಾಮಾನ್ಯ ಕಾರ್ಯಕರ್ತರಿಗೆ ಏನೇ ತೊಂದರೆಯಾದರೂ ನಾನು ಸದಾ ಅವರ ಜೊತೆ ಇರುತ್ತೇನೆ.I am a Congress worker who never wished for any post ಎಂದು ಹೇಳಿದ್ದಾರೆ.

ಡಿ.ಕೆ. ಶಿವಕುಮಾರ್ ಜೂ.3ಕ್ಕೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮೊದಲ ಹಂತದಲ್ಲಿ 11 ಸಚಿವರು ಮಾತ್ರ ಪ್ರಮಾಣ ವಚನ ಸ್ವೀಕರಿಸಿದ್ದು, ಸಚಿವ ಸ್ಥಾನಕ್ಕಾಗಿ ತೀವ್ರ ಲಾಬಿ ನಡೆದಿದೆ. ಈ ಹಿನ್ನೆಲೆಯಲ್ಲಿ ಬಿ.ಕೆ.ಹರಿಪ್ರಸಾದ್ ಹೇಳಿಕೆ ಚರ್ಚಾರ್ಹವಾಗಿದೆ.

Share this Article
Leave a comment