ಚಾಮರಾಜನಗರ: ಬೆಳ್ಳಂಬೆಳಗ್ಗೆ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಎಸಗಲು ಯತ್ನಿಸಿದ ಯುವಕನನ್ನು ರೆಡ್ ಹ್ಯಾಂಡ್ ಆಗಿ ಗ್ರಾಮಸ್ಥರು ಹಿಡಿದಿದ್ದಾರೆ.
ತಾಲೂಕಿನ ಮಸಣಾಪುರ ಗ್ರಾಮದ ಮುಖ್ಯರಸ್ತೆಯಲ್ಲಿ ಅಳವಡಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಮುಂಜಾನೆ ಯುವಕನೊಬ್ಬ ಮಸಿ ಬಳಿಯಲು ಮುಂದಾಗಿದ್ದಾನೆ. ಈ ವೇಳೆ ಗ್ರಾಮಸ್ಥರು ಯುವಕನನ್ನು ಸೆರೆಹಿಡಿದಿದ್ದಾರೆ.
ಆರೋಪಿ ಮೂಲತಃ ಮಸಣಾಪುರ ಗ್ರಾಮದವನೇ ಆಗಿದ್ದು, ಯಳಂದೂರು ತಾಲೂಕಿನ ಉಪ್ಪನಮೋಳೆ ಗ್ರಾಮದಲ್ಲಿ ವಾಸವಾಗಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಆತನನ್ನು ಬಂಧಿಸಿ ಗ್ರಾಮಸ್ಥರು ಸ್ಥಳದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸ್ಥಳದಲ್ಲಿ ಪೊಲೀಸರು ಬೀಡುಬಿಟ್ಟಿದ್ದು, ಗ್ರಾಮಸ್ಥರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯುತ್ತಿದೆ ಎಂದು ಗ್ರಾಮಸ್ಥರೊಬ್ಬರು “ಜನತಾ ರಾಯಭಾರಿ” ಗೆ ಮಾಹಿತಿ ನೀಡಿದರು.