ಕಾರೆಪಾಳ್ಯ ಗಸ್ತಿನ ಬಳಿ ಕಾಡಾನೆ ಮೃತದೇಹ ಪತ್ತೆ

ಮಣಿಕಂಠ ಜನತಾ ರಾಯಭಾರಿ
1 Min Read

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು 50 ಮೀಟರ್ ದೂರದಲ್ಲಿರುವ ಕಾಫಿ ತೋಟದಲ್ಲಿ ಒಂದು ಕಾಡಾನೆ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೃತ ಆನೆಯು ಸುಮಾರು 25 ವರ್ಷ ವಯಸ್ಸಿನ (ಮಕಣ) ಗಂಡಾನೆಯಾಗಿದ್ದು, ಮೇಲ್ನೋಟಕ್ಕೆ ಇತರೆ ಆನೆಗಳೊಂದಿಗಿನ ಕಾದಾಟದಿಂದ ಗಾಯಗೊಂಡು ಮೃತಪಟ್ಟಿರಬಹುದೆಂದು ಕಂಡುಬಂದಿದೆ. ಘಟನೆಯ ಮಾಹಿತಿ ದೊರೆತ ತಕ್ಷಣ ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಾನ್ಯ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು (DCF),  ಬಿಆರ್‌ಟಿ ವಿಭಾಗ.ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಪಶುವೈದ್ಯಾಧಿಕಾರಿಗಳ ಸಮ್ಮುಖದಲ್ಲಿ ಮೃತ ಆನೆಯ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

ಹೆಚ್ಚಿನ  ಪರಿಶೀಲನೆಗಾಗಿ ಮೃತ ಆನೆಯ ಅಂಗಾಂಗ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಬಿ.ಆರ್.ಟಿ ಅರಣ್ಯ ಇಲಾಖೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this Article
Leave a comment