ಚಾಮರಾಜನಗರ: ಜಿಲ್ಲೆಯ ಕಂದಾಯ ಇಲಾಖೆಯಲ್ಲಿ ಸ್ವತಂತ್ರ ಪ್ರಭಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಲವು ಶಿರಸ್ತೇದಾರ್ ಮತ್ತು ಉಪ ತಹಶೀಲ್ದಾರ್ ಅವರಿಗೆ ಮುಂಬಡ್ತಿ ನೀಡಿ ಸರ್ಕಾರ ಆದೇಶಿಸಿದೆ.
ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಿರಸ್ತೇದಾರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಸಿ.ಎಸ್.ಅನೋಶ್ ಅವರಿಗೆ ಚಾಮರಾಜನಗರ ತಾಲೂಕು ಗ್ರೇಡ್-2 ತಹಶೀಲ್ದಾರ್ ಆಗಿ ಮುಂಬಡ್ತಿ ನೀಡಲಾಗಿದೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾ ಶಿರಸ್ತೇದಾರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪಿ.ಪ್ರಕಾಶ್ ಅವರನ್ನು ಹನೂರು ತಾಲೂಕು ಗ್ರೇಡ್-2 ತಹಶೀಲ್ದಾರ್ ಆಗಿ ಮುಂಬಡ್ತಿ ನೀಡಲಾಗಿದೆ.
ಯಳಂದೂರು ತಾಲೂಕು ಕಚೇರಿಯಲ್ಲಿ ಶಿರಸ್ತೇದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಂ.ಶಾಂತಿ ಅವರಿಗೆ ಯಳಂದೂರು ತಾಲೂಕು ತಹಶೀಲ್ದಾರ್ ಗ್ರೇಡ್-2 ಹುದ್ದೆಗೆ ಮುಂಬಡ್ತಿ ನೀಡಲಾಗಿದೆ. ಗುಂಡ್ಲುಪೇಟೆ ತಾಲೂಕಿನ ತಹಸೀಲ್ದಾರ್ ಗ್ರೇಡ್-2 (ಸ್ವತಂತ್ರ ಪ್ರಭಾರ) ಆಗಿ ಕಾರ್ಯನಿರ್ವಹಿಸುತ್ತಿರುವ ಆರ್.ಜಯಪ್ರಕಾಶ್ ಅವರಿಗೆ ಹುದ್ದೆಯಲ್ಲಿ ಮುಂಬಡ್ತಿ ನೀಡಿ ಅದೇ ಹುದ್ದೆಯಲ್ಲಿಯೇ ಮುಂದುವರಿಯುವಂತೆ ಆದೇಶದಲ್ಲಿ ತಿಳಿಸಲಾಗಿದೆ.