ಜಿಲ್ಲಾ ನ್ಯಾಯಾಲಯಕ್ಕೆ ಮತ್ತೊಮ್ಮೆ ಹುಸಿ ಬಾಂಬ್ ಇ-ಮೇಲ್ ಸಂದೇಶ

ಮಣಿಕಂಠ ಜನತಾ ರಾಯಭಾರಿ
1 Min Read

ಚಾಮರಾಜನಗರ: ಜಿಲ್ಲಾ ನ್ಯಾಯಾಲಯಕ್ಕೆ ಮತ್ತೊಮ್ಮೆ ಕಿಡಿಗೇಡಿಗಳು ಹುಸಿ ಬಾಂಬ್ ಇ-ಮೇಲ್ ಸಂದೇಶವನ್ನು ಕಳುಹಿಸಿದ್ದು, ವಕೀಲರು ಹಾಗೂ ಸಾರ್ವಜನಿಕರು ಆತಂಕಗೊಂಡಿದ್ದಾರೆ.

ಜಿಲ್ಲಾ ಸತ್ರ ಮತ್ತು ಪ್ರಧಾನ ನ್ಯಾಯಾಲಯಕ್ಕೆ ಇತ್ತೀಚೆಗೆ ಕಿಡಿಗೇಡಿಗಳು ಹುಸಿ ಬಾಂಬ್ ಇ-ಮೇಲ್ ಸಂದೇಶವನ್ನು ಕಳುಹಿಸಿದ್ದು, ನ್ಯಾಯಾಲಯದ ಸಿಬ್ಬಂದಿಗಳು, ವಕೀಲರು ಹಾಗೂ ಸಾರ್ವಜನಿಕರು ಆತಂಕಗೊಂಡಿದ್ದರು. ಈ ವೇಳೆ ಎಲ್ಲರನ್ನೂ ನ್ಯಾಯಾಲಯದಿಂದ ಹೊರಗೆ ಕಳುಹಿಸಿ ಜಿಲ್ಲಾ ಪೊಲೀಸರು ಬಾಂಬ್ ನಿಷ್ಕ್ರಿಯ ದಳ ಮತ್ತು ಡಾಗ್ ಸ್ಕ್ವಾಡ್ ಗಳ ಮೂಲಕ ಪರಿಶೀಲನೆ ನಡೆಸಿದ್ದರು.

ಈಗ ಮತ್ತೊಮ್ಮೆ ಜಿಲ್ಲಾ ನ್ಯಾಯಾಲಯಕ್ಕೆ ಹುಸಿ ಬಾಂಬ್ ಇ-ಮೇಲ್ ಸಂದೇಶ ಬಂದಿದ್ದು, ನ್ಯಾಯಾಲಯದ ನ್ಯಾಯಾಧೀಶರು, ವಕೀಲರು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರನ್ನು ನ್ಯಾಯಾಲಯದ ಹೊರಗೆ ಕಳುಹಿಸಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಮಧ್ಯಾಹ್ನ 1 ಗಂಟೆಯ ವೇಳೆಗೆ ಬಾಂಬ್ ಸ್ಫೋಟ ವಾಗಲಿದೆ ಎಂಬ ಸಂದೇಶವನ್ನು ಕಳುಹಿಸಿದ್ದು, ಎಲ್ಲರೂ ಆತಂಕಗೊಂಡಿದ್ದಾರೆ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಪುಟ್ಟಸ್ವಾಮಿ ರಾಮಸಮುದ್ರ ಅವರು ಜನತಾ ರಾಯಭಾರಿಗೆ ಮಾಹಿತಿ ನೀಡಿದರು.

Share this Article
Leave a comment