ಗುಂಡ್ಲುಪೇಟೆ: ತಾಲೂಕಿನ ಕೂತನೂರು ಗ್ರಾಮದ ಮುಖ್ಯರಸ್ತೆಯಲ್ಲಿ ಬೈಕ್ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಓರ್ವ ಯುವಕ ಮೃತಪಟ್ಟಿದ್ದಾರೆ.
ಕೂತನೂರು ಗ್ರಾಮದ ಮಂಜು (25) ಮೃತ ದುರ್ದೈವಿ. ಈತ ಗುರುವಾರ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆಯಲ್ಲಿ ಮತ್ತೊಂದು ಬೈಕ್ ಮುಖಾಮುಖಿ ಡಿಕ್ಕಿಯೊಡೆದ ಪರಿಣಾಮವಾಗಿ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಂದು ಬೈಕ್ ನವರು ಪರಾರಿಯಾಗಿದ್ದಾರೆ.
ಅಪಘಾತ ಸ್ಥಳಕ್ಕೆ ಗುಂಡ್ಲುಪೇಟೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದರು.