ಚಾಮರಾಜನಗರ: ಮಾಜಿ ಸಂಸದ ದಿವಂಗತ ಆರ್.ಧ್ರುವನಾರಾಯಣರವರ 65ನೇ ಹುಟ್ಟು ಹಬ್ಬದ ಅಂಗವಾಗಿ ಅಭಿಮಾನಿಗಳ ಬಳಗದ ವತಿಯಿಂದ ಉಚಿತ ಆಯುರ್ವೇದ ಆರೋಗ್ಯ ತಪಾಸಣಾ ಶಿಬಿರ ಹಾಗೂ 65 ಗಿಡ ನೆಡುವ ಕಾರ್ಯಕ್ರಮವನ್ನು ಜು.31 ಶುಕ್ರವಾರ ಹಮ್ಮಿಕೊಳ್ಳಲಾಗಿದೆ.
ನಗರದ ರೋಟರಿ ಭವನದಲ್ಲಿ ಬೆಳಿಗ್ಗೆ 10.30 ಗಂಟೆಗೆ ಪ್ರಾರಂಭವಾಗುವ ಕಾರ್ಯಕ್ರಮಕ್ಕೆ ಗಣ್ಯರು ಚಾಲನೆ ನೀಡಲಿದ್ದಾರೆ. ಈ ಸಂದರ್ಭದಲ್ಲಿ ವರ್ತಕರ ಭವನದಿಂದ ರಾಮಸಮುದ್ರದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆಯವರೆಗೆ ರಸ್ತೆಯ 2 ಬದಿಗಳಲ್ಲಿ 65 ಗಿಡಗಳ ನೆಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ರೋಟರಿ ಸಂಸ್ಥೆ ನಡೆಸುತ್ತಿರುವ ಡಯಾಲಿಸಸ್ ಕೇಂದ್ರಕ್ಕೆ ಧ್ರುವನಾರಾಯಣ್ ನೆನಪಿನಲ್ಲಿ ಒಂದು ದಿನದ ವೆಚ್ಚವನ್ನು ನೀಡುವುದು, ಅನೀಮಿಯಾ ತಪಾಸಣಾ ಶಿಬಿರ ಹಾಗೂ ಔಷಧಿ ವಿತರಣೆ ಮಾಡಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಯಶಸ್ವಿಗೊಳಿಸಿಕೊಡುವಂತೆ ಆರ್. ಧ್ರುವನಾರಾಯಣ ಅಭಿಮಾನಿ ಬಳಗ ಅಧ್ಯಕ್ಷ ಕಾಗಲವಾಡಿ ಚಂದ್ರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.