ಅಲ್ಪಸಂಖ್ಯಾತರ ಇಲಾಖೆ ಮೇಲೆ ಲೋಕಾಯುಕ್ತ ದಾಳಿ, ಇಬ್ಬರು ಬಲೆಗೆ 

ಮಣಿಕಂಠ ಜನತಾ ರಾಯಭಾರಿ
1 Min Read

ಚಾಮರಾಜನಗರ: ಜಿಲ್ಲಾ ಅಲ್ಪಸಂಖ್ಯಾತರ ಇಲಾಖೆ ಕಚೇರಿಯ ಮೇಲೆ ಗುರುವಾರ ಲೋಕಾಯುಕ್ತ ದಾಳಿ ನಡೆಸಿದ್ದು, ಇಬ್ಬರು ಬಲೆಗೆ ಬಿದ್ದಿದ್ದಾರೆ.

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಕ್ರಿಶ್ಚಿಯನ್ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಕಚೇರಿಜಿಲ್ಲಾ ವ್ಯವಸ್ಥಾಪಕರಾದ ನಾಗೇಂದ್ರ ಮತ್ತು ಕೇಸ್ ವರ್ಕರ್ ಸರ್ವಮಂಗಳ ಅವರು 15 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಡಿವೈಎಸ್ಪಿ ಗಜೇಂದ್ರ ಪ್ರಸಾದ್ ಮತ್ತು ತಂಡದವರ ಬಲೆಗೆ ಬಿದ್ದಿದ್ದಾರೆ.

ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ದೂರುದಾರ ಮೊಹಮ್ಮದ್ ಜುಬೇರ್ ಎಂಬುವವರು ಕಾರು ಲೋನ್ ಸಹಾಯಧನವನ್ನು ಪಡೆಯಲು ಅರ್ಜಿ ಸಲ್ಲಿಸಿದ್ದರು. ಈ ವೇಳೆ ಅಧಿಕಾರಿಗಳು 15 ಸಾವಿರ ರೂ, ಲಂಚ ಕೊಡುವಂತೆ ಬೇಡಿಕೆ ಇಟ್ಟಿದ್ದರು‌ ಎಂದು ಲೋಕಾಯುಕ್ತ ಅಧಿಕಾರಿಗಳು “ಜನತಾ ರಾಯಭಾರಿ” ಗೆ ಮಾಹಿತಿ ನೀಡಿದರು.

Share this Article
Leave a comment