ಚಾಮರಾಜನಗರ: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಎರಡನೇ ಅವಧಿಯಲ್ಲಿ ಚಾಮರಾಜನಗರ ಜಿಲ್ಲೆಗೆ ಸಚಿವ ಸ್ಥಾನ ಒಲಿದಿದ್ದು, ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಎರಡನೇ ಬಾರಿಗೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರದಲ್ಲಿ ಮೊದಲನೇ ಹಂತದಲ್ಲಿ ಕೆಲವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಈಗ ಎರಡನೇ ಹಂತದಲ್ಲಿ 20 ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದು, ಸಂಜೆ 4 ಗಂಟೆಗೆ ರಾಜಭವನದಲ್ಲಿ ಪ್ರತಿಮೆ ವಚನ ಕಾರ್ಯಕ್ರಮ ನಡೆಯಲಿದೆ.

ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಪಟ್ಟಿಯನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದ್ದು, ಅದರಂತೆ ಶಾಸಕರಾದ ಪಿ.ಎಂ.ನರೇಂದ್ರಸ್ವಾಮಿ, ಶಿವರಾಜ್ ತಂಗಡಗಿ, ರುದ್ರಪ್ಪ ಲಮಾಣಿ, ಕೆ.ಎಸ್.ಬಸವಂತಪ್ಪ, ಬಿ.ನಾಗೇಂದ್ರ, ಟಿ.ರಘುಮೂರ್ತಿ, ಬಿ.ಜಮೀರ್ ಅಹಮ್ಮದ್, ರಿಜ್ವಾನ್ ಅರ್ಷದ್, ಸಂತೋಷ್ ಲಾಡ್, ಮಧು ಬಂಗಾರಪ್ಪ, ಸಿ.ಪುಟ್ಟರಂಗಶೆಟ್ಟಿ, ಮಂಕಾಳ ವೈದ್ಯ, ಡಾ.ಅಜಯ್ ಸಿಂಗ್, ಎನ್.ಚಲುವರಾಯಸ್ವಾಮಿ, ಕೆ.ಎಂ.ಶಿವಲಿಂಗೇಗೌಡ, ಎಚ್.ಸಿ.ಬಾಲಕೃಷ್ಣ, ಗಾಯತ್ರಿ ಶಾಂತೇಗಿಡ, ಬಸವರಾಜ ರಾಯರೆಡ್ಡಿ, ವಿಜಯಾನಂದ ಕಾಶಪ್ಪನವರ್ ಹಾಗೂ ಲಕ್ಷ್ಣಣ್ ಸವದಿ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.