ರಾಮಪುರ ಸಮೀಪ ಹಿಟ್ ಆಂಡ್ ರನ್; ಇಬ್ಬರು ಸ್ಥಳದಲ್ಲೇ ಸಾವು

ಮಣಿಕಂಠ ಜನತಾ ರಾಯಭಾರಿ
0 Min Read

ಹನೂರು: ರಾಮಪುರ ಠಾಣಾ ವ್ಯಾಪ್ತಿಯ ಸಂತೆಖಾನೆ ಹತ್ತಿರ ಮಹದೇಶ್ವರ ಬೆಟ್ಟ ಮುಖ್ಯ ರಸ್ತೆಯಲ್ಲಿ ಸಂಭವಿಸಿದ ಹಿಟ್ ಆಂಡ್ ರನ್ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದ ಯುವರಾಜ್ (50) ಮತ್ತು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಎ ಕೋಡಹಳ್ಳಿ ಗ್ರಾಮದ ಶಶಾಂಕ್ (25) ಮೃತಪಟ್ಟವರು.

ಅಪಘಾತದ ಮಾಹಿತಿ ತಿಳಿದ ತಕ್ಷಣ ರಾಮಪುರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕೊಳ್ಳೇಗಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

Share this Article
Leave a comment