ಮೈಸೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ ಕೋಮುವಾದ ಮತ್ತು ಜಾತಿವಾದದಿಂದ ಪ್ರೇರಿತವಾದ ‘ಸಾವಿರ ತಲೆಯ ವಿಷಪೂರಿತ ಹಾವು’ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾಷಣ ಬಳಿಕ ಸ್ಥಳವನ್ನು ಶುದ್ಧೀಕರಣ ಮಾಡಿದ್ದನ್ನು ವಿರೋಧಿಸಿ ಆ.15 ರಂದು ಮೈಸೂರಿನ ಕಾಂಗ್ರೆಸ್ ಕಚೇರಿ ಮುಂದೆ ನಡೆದ ಪ್ರತಿಭಟನೆ ವೇಳೆ ಅವರು ಮಾತನಾಡಿ, ಆರ್‌ಎಸ್‌ಎಸ್ ಸಾವಿರ ತಲೆಯ ವಿಷಕಾರಿ ಹಾವಿನಂತಿದೆ. ಇದು ಜಾತಿವಾದ, ಕೋಮುವಾದ ಮತ್ತು ಮನುವಾದದ ವಿಷದಿಂದ ತುಂಬಿದೆ. ಇದು ವಿಷವನ್ನು ಕಾರುತ್ತಾ ಇಡೀ ಸಮಾಜವನ್ನೇ ವಿಷಪೂರಿತಗೊಳಿಸಲು ಯತ್ನಿಸುವ ಹಾವಾಗಿದೆ. ಇದನ್ನು ನಿಯಂತ್ರಿಸದೆ ಬಿಟ್ಟರೆ, ನಮ್ಮ ಸಮಾಜ ಹಾಳಾಗುತ್ತದೆ ಮತ್ತು ದೇಶಕ್ಕೂ ಹಾನಿಯಾಗುತ್ತದೆ’ ಎಂದು ಕಿಡಿಕಾರಿದ್ದರು.
ಬಿಜೆಪಿ, ಆರ್‌ಎಸ್‌ಎಸ್ ಹಾಗೂ ಶ್ರೀರಾಮ ಸೇನೆಯವರು ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಲ್ಲಿ ಕ್ಷಮೆಯನ್ನು ಕೇಳಬೇಕು. ಅವರು ಸಾರ್ವಜನಿಕವಾಗಿ ಕ್ಷಮೆ ಕೇಳುವವರೆಗೂ ನಾವು ಪ್ರತಿಭಟನೆಯನ್ನು ಮುಂದುವರಿಸಬೇಕು. ಪ್ರತಿಯೊಬ್ಬರು ಆರ್.ಎಸ್.ಎಸ್ ಹೀನ ಮನಸ್ಥಿತಿಯನ್ನು ಖಂಡಿಸಬೇಕು ಎಂದು ವಾಗ್ದಾಳಿ ನಡೆಸಿದ್ದರು. ಇದೀಗ ಯತೀಂದ್ರ ಸಿದ್ದರಾಮಯ್ಯ ಅವರು ಮಾತನಾಡಿದ ವಿಡಿಯೋ ತುಂಬಾ ವೈರಲ್ ಆಗಿದ್ದು, ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿದೆ.