ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದವನ ಬಂಧನ 

ಮಣಿಕಂಠ ಜನತಾ ರಾಯಭಾರಿ
1 Min Read

ಚಾಮರಾಜನಗರ: ಯಳಂದೂರು ಬಸ್ ನಿಲ್ದಾಣದಲ್ಲಿ ಅಕ್ರಮವಾಗಿ ಕೇರಳ ಲಾಟರಿ ಮಾರಾಟ ಮಾಡುತ್ತಿದ್ದವನನ್ನು ಪೊಲೀಸರು ಬಂಧಿಸಿ, ಕೇರಳ ಲಾಟರಿಯನ್ನು ವಶಪಡಿಸಿಕೊಂಡಿದ್ದಾರೆ.

ಯಳಂದೂರು ಎಲೆಕೇರಿ ಬೀದಿಯ ಶ್ರೀನಿವಾಸ ಬಂಧಿತ ಆರೋಪಿ. ಈತ ಯಳಂದೂರು ಬಸ್ ನಿಲ್ದಾಣದಲ್ಲಿ ಅಕ್ರಮವಾಗಿ ಕೇರಳ ಲಾಟರಿ ಟಿಕೆಟ್ ಗಳನ್ನು ಮಾರಾಟ ಮಾಡುತ್ತಿದ್ದನು. ಯಳಂದೂರು ಠಾಣೆಯ ಇನ್ಸ್ಪೆಕ್ಟರ್ ಸುಬ್ರಹ್ಮಣ್ಯ ಅವರಿಗೆ ದೊರೆತ ಮಾಹಿತಿಯ ಮೇರೆಗೆ ಗುರುವಾರ ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ದಾಳಿಯ ವೇಳೆ ಆರೋಪಿಯ ಬಳಿ ಇದ್ದ 4500 ರೂ, ಮೌಲ್ಯದ ಸುಮಾರು 90 ಲಾಟರಿ ಟಿಕೆಟ್ ಹಾಗೂ ಲಾಟರಿ ಮಾರಾಟ ಮಾಡಿ ಆತನ ಬಳಿ ಇದ್ದ 6960 ರೂ, ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಸಂಬಂಧ ಯಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾ

ಗಿದೆ.

Share this Article
Leave a comment