ಜಯಕುಮಾರ್ ಪುತ್ರ ಹೇಮಂತ್ ನಿಧನ: ನಿವಾಸಕ್ಕೆ ಸಂಸದ ಸುನೀಲ್ ಬೋಸ್ ಭೇಟಿ

ಮಣಿಕಂಠ ಜನತಾ ರಾಯಭಾರಿ
1 Min Read

ಚಾಮರಾಜನಗರ, ಆ.25: ಜಿಲ್ಲಾ ಉಪ್ಪಾರ ಯುವಕರ ಸಂಘದ ಅಧ್ಯಕ್ಷ ಜಯಕುಮಾರ್ ಅವರ ಪುತ್ರ ಹೇಮಂತ್ ಕುಮಾರ್ ಅವರು ಇತ್ತೀಚೆಗೆ ಮೈಸೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಹಿನ್ನೆಲೆಯಲ್ಲಿ ನಗರದ ಚನ್ನಿಪುರಮೋಳೆಯಲ್ಲಿರುವ ಅವರ ನಿವಾಸಕ್ಕೆ ಸಂಸದ ಸುನೀಲ್ ಬೋಸ್ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಹೇಮಂತ್ ಕುಮಾರ್ ಜೆ ಅವರ ನಿಧನಕ್ಕೆ ಸಂತಾಪ ಸೂಚಿಸಿದ ಸಂಸದರು, ಕುಟುಂಬಸ್ಥರೊಂದಿಗೆ ಮಾತನಾಡಿ ಅವರ ದುಃಖದಲ್ಲಿ ಭಾಗಿಯಾದರು. ಅಗಲಿದ ಜೆ.ಹೇಮಂತ್ ಕುಮಾರ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬಸ್ಥರಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಕಸಬಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಮಹೇಶ್ ಕುದರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಬಿ.ಸ್ವಾಮಿ, ಜಿಲ್ಲಾ ಪಂಚಾಯಿತಿ ಕೆಡಿಪಿ ಸದಸ್ಯ ಸೈಯದ್ ಮುಸಾಯದ್, ತಾಲೂಕು ಪಂಚಾಯಿತಿ ಕೆಡಿಪಿ ಸದಸ್ಯ ಶ್ರೀನಿವಾಸ್, ಭೀಮ್ ರಾವ್ ಅಂಬೇಡ್ಕರ್ ಸೇನೆ ಅಧ್ಯಕ್ಷ ಗಣೇಶ್ ಪ್ರಸಾದ್, ಶೇಷಣ್ಣ, ಅಮಚವಾಡಿ ಶಿವಣ್ಣ ಹಾಗೂ ಇತರರು ಹಾಜರಿದ್ದರು.

Share this Article
Leave a comment