ಜನರ ಕುಂದುಕೊರತೆ ಆಲಿಸಲು ಎಂಎಲ್ಸಿ ಕೆ.ಶಿವಕುಮಾರ್ ಅವರ ಕಚೇರಿ ಉದ್ಘಾಟನೆ

ಮಣಿಕಂಠ ಜನತಾ ರಾಯಭಾರಿ
1 Min Read

ಮೈಸೂರು: ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲು ಹಾಗೂ ಸರ್ಕಾರದ ವಿವಿಧ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವ ಉದ್ದೇಶದಿಂದ ಆ.29 ರಂದು ವಿಧಾನ ಪರಿಷತ್ ಸದಸ್ಯರಾದ ಕೆ.ಶಿವಕುಮಾರ್ ಅವರ ಕಚೇರಿ ಉದ್ಘಾಟನೆಯಾಗಲಿದೆ.

ಮೈಸೂರಿನ ಜಲದರ್ಶಿನಿ ಅತಿಥಿ ಗೃಹದ ಆವರಣದಲ್ಲಿ ಬೆಳಿಗ್ಗೆ 10.30 ಗಂಟೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ಕಚೇರಿಯ ಉದ್ಘಾಟನೆ ನೇರವೇರಿಸಲಿದ್ದಾರೆ. ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಯತೀಂದ್ರ ಸಿದ್ಧರಾಮಯ್ಯ, ಮಾಜಿ ಸಚಿವರುಗಳು, ಸಂಸದರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಸೇರಿದಂತೆ ಎಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿರಲಿದ್ದಾರೆ.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಹಿತೈಷಿಗಳು ಹಾಗೂ ವಿಧಾನಪರಿಷತ್ ಸದಸ್ಯರು ಹಾಗೂ ಹಿರಿಯ ಪತ್ರಕರ್ತರಾದ ಕೆ.ಶಿವಕುಮಾರ್ ಅವರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Share this Article
Leave a comment