ಪ್ರತಿಯೊಬ್ಬರು ಆರೋಗ್ಯದ ಕಡೆ ಗಮನಹರಿಸಿ- ಡಾ.ಎ.ಆರ್.ಬಾಬು ಸಲಹೆ 

ಮಣಿಕಂಠ ಜನತಾ ರಾಯಭಾರಿ
1 Min Read

ಚಾಮರಾಜನಗರ, ಆ,27: ಪ್ರಸ್ತುತ ಬದಲಾದ ಆಹಾರ ವ್ಯವಸ್ಥೆಯಿಂದ ಸಾಕಷ್ಟು ಆರೋಗ್ಯ ಸಮಸ್ಯೆಗಳು ಕಂಡುಬರುತ್ತಿದ್ದು, ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಜಾಗೃತಿವಹಿಸಿ ಎಂದು ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯ ಡಾ.ಎ.ಆರ್.ಬಾಬು ಸಲಹೆ ನೀಡಿದರು.

ತಾಲೂಕಿನ ಕೋಳಿಪಾಳ್ಯ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮೈಸೂರಿನ ಜೆಎಸ್ಎಸ್ ಆಸ್ಪತ್ರೆ, ಡಾ.ಬಾಬು ಸೋಶಿಯಲ್ ವೆಲ್ಫೇರ್ ಅಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬುಧವಾರ ಆಯೋಜಿಸಿದ್ದ ಕಣ್ಣು, ಕಿವಿ, ಮೂಗು ಮತ್ತು ಗಂಟಲು ಉಚಿತ ತಪಾಸಣಾ ಶಿಬಿರದಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರತಿಯೊಬ್ಬ ಮನುಷ್ಯನಿಗೂ ಪಂಚೇಂದ್ರಿಯಗಳು ಅತ್ಯಂತ ಅವಶ್ಯಕವಾಗಿದ್ದು, ಇದರ ಆರೋಗ್ಯದ ಕಡೆ ಗಮನವಿರಬೇಕು. ಪ್ರತಿಯೊಬ್ಬ ವ್ಯಕ್ತಿಯು ಆರೋಗ್ಯವಾಗಿದ್ದರೇ ಮಾತ್ರ ಆತ ಜೀವನದಲ್ಲಿ ಏನನ್ನಾದರೂ ಸಾಧಿಸಲು ಸಾಧ್ಯವಾಗುತ್ತದೆ. ಅದರಲ್ಲೂ ಕಾಡಂಚಿನ ಪ್ರದೇಶಗಳಲ್ಲಿ ವಾಸಿಸುವ ಜನರು ಇತ್ತೀಚಿನ ದಿನಗಳಲ್ಲಿ ಬದಲಾದ ಜೀವನಶೈಲಿಯಿಂದ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕಿದೆ ಎಂದು ಸಲಹೆ ನೀಡಿದರು.

ಶಿಬಿರದಲ್ಲಿ 250 ಕ್ಕೂ ಹೆಚ್ಚು ರೋಗಿಗಳನ್ನು ಪರೀಕ್ಷಿಸಿ ಸಲಹೆ ನೀಡಲಾಯಿತು. ಬಳಿಕ ಕೆಲವರನ್ನು ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಜೆಎಸ್ಎಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು.

ಈ ಸಂದರ್ಭದಲ್ಲಿ ಮೈಸೂರಿನ ಜೆಎಸ್ಎಸ್ ಆಸ್ಪತ್ರೆಯ ಡಾ.ರಿತಿಕಾ, ಡಾ.ಕಾತ್ಯಾಯನಿ, ಡಾ.ಪ್ರಾಣೇಶ್, ಡಾ.ಸ್ನೇಹಾ ಪಾಟೀಲ್, ಮುಖಂಡರಾದ ಮೂಡಹಳ್ಳಿ ಮೂರ್ತಿ, ಗುರು ನಾಯಕ್, ಚಂದ್ರಶೇಖರ್, ಮುತ್ತು ನಾಯಕ, ಚಿನ್ನಸ್ವಾಮಿಗೌಡ, ಜೆಎಸ್ಎಸ್ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಹಾಜರಿದ್ದರು.

Share this Article
Leave a comment