ಚಾಮರಾಜನಗರ ಜಿಲ್ಲೆ ತೀವ್ರ ಬರಪೀಡಿತ ಪ್ರದೇಶವೆಂದು ಘೋಷಣೆ!

ಮಣಿಕಂಠ ಜನತಾ ರಾಯಭಾರಿ
1 Min Read

ಚಾಮರಾಜನಗರ: ಮಳೆ ಕೊರತೆಯಿಂದಾಗಿ ರಾಜ್ಯ ಸರ್ಕಾರ ಪ್ರಕಟಿಸಿರುವ 101 ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಚಾಮರಾಜನಗರದ ಎಲ್ಲಾ 5 ತಾಲೂಕುಗಳು ಸೇರಿವೆ.

ಜಿಲ್ಲೆಯ ಹನೂರು, ಕೊಳ್ಳೇಗಾಲ, ಚಾಮರಾಜನಗರ, ಗುಂಡ್ಲುಪೇಟೆ ಹಾಗೂ ಯಳಂದೂರು ತಾಲೂಕುಗಳನ್ನು ಬರಪೀಡಿತ ತಾಲೂಕುಗಳು ಎಂದು ಸರ್ಕಾರ ಘೋಷಣೆ ಮಾಡಿದೆ.

ಇತ್ತೀಚೆಗೆ ರಾಜ್ಯ ಸರ್ಕಾರ ಬರಪೀಡಿತ ತಾಲೂಕುಗಳ ಘೋಷಣೆಗೆ ಸಂಬಂಧಪಟ್ಟ ಉಸ್ತುವಾರಿ ಸಚಿವರ ಮೂಲಕ ಪ್ರವಾಸ ಮಾಡಿಸಿ, ಅಧ್ಯಯನದ ವರದಿ ಪಡೆದುಕೊಂಡಿತ್ತು. ಚಾಮರಾಜನಗರ ಜಿಲ್ಲೆಯ 5 ತಾಲೂಕುಗಳಿಗೂ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರು ಭೇಟಿ ನೀಡಿ ಬರದ ಸ್ಥಿತಿಯನ್ನು ಕಣ್ಣಾರೆ ಕಂಡಿದ್ದರು. ಈ ನಿಟ್ಟಿನಲ್ಲಿ ಜಿಲ್ಲೆಯ ಐದು ತಾಲೂಕುಗಳನ್ನು ಬರಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಲಾಗಿದೆ.

ಜಿಲ್ಲಾಧಿಕಾರಿ ಶ್ರೀರೂಪ ಕಟ್ಟುನಿಟ್ಟಿನ ಸೂಚನೆ: ಜಿಲ್ಲೆಯ ಐದು ತಾಲೂಕುಗಳನ್ನು ಬರಪೀಡಿತ ತಾಲೂಕುಗಳು ಎಂದು ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರು ಮತ್ತು ಮೇವಿನ ಸಮಸ್ಯೆ ಎದುರಾಗದಂತೆ ತುರ್ತು ಪರಿಹಾರ ಒದಗಿಸಲು ಜಿಲ್ಲಾಧಿಕಾರಿ ಶ್ರೀ ರೂಪಾ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

Share this Article
Leave a comment