ಅಪರಿಚಿತ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ 

ಮಣಿಕಂಠ ಜನತಾ ರಾಯಭಾರಿ
0 Min Read

ಚಾಮರಾಜನಗರ: ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹವೊಂದು ಭಾನುವಾರ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ನಗರದ ಹೊರವಲಯದಲ್ಲಿರುವ ಕೃಷಿ ವಿಜ್ಞಾನ ಕೇಂದ್ರ ರಸ್ತೆಯ ಸಮೀಪದಲ್ಲಿ ಯಾವುದೋ ಒಂದು ಅಪರಿಚಿತ ಹೆಣ ಇದೆ ಎಂದು ಸ್ಥಳೀಯರಿಗೆ ತಿಳಿದುಬಂದಿದೆ. ಈ ಸಂಬಂಧ ರಾಮಸಮುದ್ರ ಪೂರ್ವ ಪೊಲೀಸ್ ಠಾಣೆಯ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮೃತ ದೇಹವು ಕೊಳೆತ ಸ್ಥಿತಿಯಲ್ಲಿದ್ದು, ಅನುಮಾನಗಳು ವ್ಯಕ್ತವಾಗಿದೆ. ಈ ಕುರಿತು ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

Share this Article
Leave a comment