ಸೆ.9 ರಂದು ಮಾಜಿ ಶಾಸಕ ಎಸ್.ಜಯಣ್ಣ ಜನ್ಮದಿನಾಚರಣೆ

ಮಣಿಕಂಠ ಜನತಾ ರಾಯಭಾರಿ
1 Min Read

ಚಾಮರಾಜನಗರ, ಸೆ.6: ಮಾಜಿ ಶಾಸಕ ಎಸ್.ಜಯಣ್ಣ ಅವರ ಅಭಿಮಾನಿ ಬಳಗದ ವತಿಯಿಂದ ದಿ.ಎಸ್.ಜಯಣ್ಣ ಅವರ ಜನ್ಮದಿನಾಚರಣೆ ಕಾರ್ಯಕ್ರಮವನ್ನು ಸೆ.9 ರಂದು ಹಮ್ಮಿಕೊಳ್ಳಲಾಗಿದೆ.

ಯಳಂದೂರು ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಅಂದು ಬೆಳಗ್ಗೆ 10.30 ಗಂಟೆಗೆ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರು ಹಾಗೂ ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಮಾಜಿ ಅಧ್ಯಕ್ಷರಾಗಿದ್ದ ದಿವಂಗತ ಎಸ್. ಜಯಣ್ಣ ಅವರ ಜನ್ಮದಿನದ ಅಂಗವಾಗಿ ಅವರ ಅಭಿಮಾನಿಗಳು, ಒಡನಾಡಿಗಳು ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಕುಟುಂಬಸ್ಥರು, ಹಿತೈಷಿಗಳು ಹಾಗೂ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಎಸ್.ಜಯಣ್ಣ ಅಭಿಮಾನಿ ಬಳಗದ ಡಾ.ಮಹದೇವಯ್ಯ ವಡ್ಡಗೆರೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this Article
Leave a comment