ಅಕ್ರಮವಾಗಿ ಪಡಿತರ ಸಾಗಾಣಿಕೆ; ವಾಹನ ಮತ್ತು ಅಕ್ಕಿ ವಶ

ಮಣಿಕಂಠ ಜನತಾ ರಾಯಭಾರಿ
1 Min Read

ಚಾಮರಾಜನಗರ, ಸೆ.25: ಕೆಸ್ತೂರು ಗ್ರಾಮದಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಾಗಾಣಿಕೆ ಮಾಡುತ್ತಿದ್ದ ವಾಹನ ಹಾಗೂ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಚಾಮರಾಜನಗರ ತಾಲೂಕು ಕಚೇರಿಯ ಆಹಾರ ನಿರೀಕ್ಷಕ ಚಿಕ್ಕಣ್ಣ ಅವರು ನೀಡಿದ ದೂರಿನ ಅನ್ವಯ ಕುದೇರು ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಚಿಕ್ಕಣ್ಣ ಅವರು, ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದ ದೊಡ್ಡಮ್ಮತಾಯಿ ದೇವಸ್ಥಾನದ ಬಳಿ ಅಕ್ರಮವಾಗಿ ಪಡಿತರ ತುಂಬಿಕೊಂಡು ಹೋಗುತ್ತಿದ್ದ ಓಮ್ನಿ ಕಾರಿನ ಮೇಲೆ ದಾಳಿ ನಡೆಸಿದ್ದು, ಅಕ್ಕಿ ಹಾಗೂ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.

ಅಕ್ರಮ ಪಡಿತರ ಅಕ್ಕಿ ತುಂಬಿದ್ದ 23 ಚೀಲಗಳಲ್ಲಿ 22,990 ರೂ, ಮೌಲ್ಯದ 1045 ಕೆ.ಜಿ ಅಕ್ಕಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಯ ಪತ್ತೆಗೆ ಪೊಲೀಸರು ಕ್ರಮವಹಿಸಿದ್ದಾರೆ.

 

Share this Article
Leave a comment