ದೈವ ಭಕ್ತಿಯಷ್ಟೇ ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಿ 

ಮಣಿಕಂಠ ಜನತಾ ರಾಯಭಾರಿ
1 Min Read

*ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆನಂದ್ ಭಗೀರಥ ಸಲಹೆ 

*ನಗರದ ಉಪ್ಪಾರ ಬಡಾವಣೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ 

ಚಾಮರಾಜನಗರ, ಅ.9: ಸಾರ್ವಜನಿಕರು ದೈವಭಕ್ತಿಯಷ್ಟೇ ತಮ್ಮ ಆರೋಗ್ಯದ ಕಡೆಯೂ ಹೆಚ್ಚಿನ ಗಮನವನ್ನು ಹರಿಸಬೇಕಿದೆ ಎಂದು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆನಂದ್ ಭಗೀರಥ ಸಲಹೆ ನೀಡಿದರು.

ನಗರದ ಉಪ್ಪಾರ ಬಡಾವಣೆಯ ಗರಡಿ ಮನೆ ಸಮೀಪ 21ನೇ ವರ್ಷದ ಗಣೇಶ ಮಹೋತ್ಸವದ ಅಂಗವಾಗಿ ಗುರುವಾರ ಆಯೋಜಿಸಿದ್ದ ಆರೋಗ್ಯ ಉಚಿತ ತಪಾಸಣಾ ಶಿಬಿರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಉಪ್ಪಾರ ಬಡಾವಣೆಯ ಗರಡಿ ಮನೆ ಸಮೀಪ ಕಳೆದ 20 ವರ್ಷಗಳಿಂದಲೂ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿಕೊಂಡು ಬರಲಾಗುತ್ತಿದೆ. ಈ ಬಾರಿ ವಿಶೇಷವಾಗಿ ಗಣೇಶೋತ್ಸವದ ಅಂಗವಾಗಿ ಆರೋಗ್ಯ ತಪಾಸಣೆ ಆಯೋಜಿಸಿದ್ದು, ಸಾರ್ವಜನಿಕರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಗಮನಹರಿಸಬೇಕಿದೆ ಎಂದರು.

ನಮ್ಮ ವಾರ್ಡ್ ವ್ಯಾಪ್ತಿಯಲ್ಲಿ ಸಾರ್ವಜನಿಕರು ಸ್ವಚ್ಛತೆಯನ್ನು ಕಪಾಡಿಕೊಳ್ಳಬೇಕು. ವಾರ್ಡ್ ವ್ಯಾಪ್ತಿಯಲ್ಲಿ ಸ್ವಚ್ಛತೆಯನ್ನು ಕಪಾಡಿಕೊಂಡರೇ, ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ. ಈ ನಿಟ್ಟಿನಲ್ಲಿ ಆಯೋಜಿಸಿರುವ ಇಂತಹ ಶಿಬಿರಗಳನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಮೂಡ್ಲುಪುರ ನಂದೀಶ್ ಮಾತನಾಡಿ, ಆರೋಗ್ಯವೇ ಭಾಗ್ಯವಿದ್ದಂತೆ, ಆಗಾಗಿ ಪ್ರತಿಯೊಬ್ಬರು ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಪ್ರಸ್ತುತ ಸಂದರ್ಭದಲ್ಲಿ ಹಣಕ್ಕಿಂತಲೂ ಆರೋಗ್ಯ ಅತ್ಯಂತ ಅಗತ್ಯವಾಗಿದೆ ಎಂದರು.

ಸೆಸ್ಕ್ ಲೆಕ್ಕಾಧಿಕಾರಿ ಎನ್.ಮಹೇಶ್ ಮಾತನಾಡಿ, ಗಣೇಶ ಮಹೋತ್ಸವದ ಅಂಗವಾಗಿ ಇಂತಹ ಜನೋಪಯೋಗಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದು ಅತ್ಯಂತ ಸಹಕಾರಿಯಾಗಿದೆ. ಸಾರ್ವಜನಿಕರು ಇಂತಹ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಶಿಬಿರದಲ್ಲಿ ನೂರಾರು ಸಾರ್ವಜನಿಕರು ಭಾಗವಹಿಸಿ ವಿವಿಧ ಆರೋಗ್ಯ ತಪಾಸಣೆ ಮಾಡಿಸಿಕೊಂಡರು. ಈ ವೇಳೆ ತಪಾಸಣೆ ಮಾಡಿಸಿಕೊಂಡವರಿಗೆ ಉಚಿತವಾಗಿ ಔಷಧಿಗಳನ್ನು ವಿತರಣೆ ಮಾಡಲಾಯಿತು. ಈ ವೇಳೆ ನಗರಸಭೆ ಹಿರಿಯ ಆರೋಗ್ಯ ನಿರೀಕ್ಷಕ ಮಂಜು, ಮುಖಂಡ ಪೈನಾಪಲ್ ಮಂಜು, ಯಶವಂತ್ ಕುಮಾರ್, ಪ್ರಕಾಶ್, ಡಾ.ಚಂದ್ರಶೇಖರ್, ಡಾ.ಪ್ರಸನ್ನಕುಮಾರ್, ಡಾ.ನಟರಾಜ್, ಡಾ.ರಶೀಧಾ, ಮಂಜು, ಪ್ರಕಾಶ್ ಹಾಗೂ ಇತರರು ಹಾಜರಿದ್ದರು.

Share this Article
Leave a comment