ಗವಿಮಠದ ಶ್ರೀಗಳಿಂದ ಮೈಸೂರು ದಸರಾಗೆ ಅದ್ಧೂರಿ ಚಾಲನೆ

ಮಣಿಕಂಠ ಜನತಾ ರಾಯಭಾರಿ
1 Min Read

ಚಾಮರಾಜನಗರ: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ-2026ಕ್ಕೆ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಮಹಾಸ್ವಾಮೀಜಿ ಅವರು ಭಾನುವಾರ ಚಾಲನೆ ನೀಡಿದರು.

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ನಾಡ ದೇವತೆ ಶ್ರೀ ಚಾಮುಂಡೇಶ್ವರಿಗೆ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಮಹಾಸ್ವಾಮೀಜಿ ಅವರು ವಿಶೇಷ ಪೂಜೆ ಸಲ್ಲಿಸಿ, ಬೆಳ್ಳಿ ರಥದಲ್ಲಿರುವ ಮಹಿಷ ಮರ್ದಿನಿ ಮೂರ್ತಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ, ಸಂಸದ ಸುನೀಲ್ ಬೋಸ್ ಹಾಗೂ ಹಲವು ಗಣ್ಯರು ಹಾಜರಿದ್ದರು.

11 ದಿನಗಳ ವೈಭವ: ಚಾಮುಂಡಿ ಬೆಟ್ಟದಲ್ಲಿ ಇಂದು ವಿಶ್ವವಿಖ್ಯಾತ ದಸರಾ ಮಹೋತ್ಸವ ಉದ್ಘಾಟನೆಯಾಗಿದ್ದು, 11 ದಿನಗಳು ವೈಭವದ ದಸರಾ ಮಹೋತ್ಸವ ನಡೆಯಲಿದೆ. ಕುಪ್ಪಣ್ಣ ಪಾರ್ಕ್ ನಲ್ಲಿ ಫಲಪುಷ್ಪ ಪ್ರದರ್ಶನ, ಮಹಾರಾಜ ಕಾಲೇಜು ಮೈದಾನದಲ್ಲಿ ಆಹಾರ ಮೇಳ, ಅರಮನೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿದ್ದು, ಅಕ್ಟೋಬರ್ 21 – ವಿಜಯದಶಮಿ, ಅದ್ಧೂರಿ ಜಂಬೂಸವಾರಿ ಮತ್ತು ಪಂಜಿನ ಕವಾಯತು ನಡೆಯಲಿದೆ. ಈಗಾಗಲೇ ಮೈಸೂರು ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ.

Share this Article
Leave a comment