ಚಾಮರಾಜನಗರ, ಅ.22: ಜಿಲ್ಲೆಯಲ್ಲಿ ಅ.24 ಮತ್ತು 25 ರಂದು ನಡೆಯಲಿರುವ ಅಂತಾರಾಷ್ಟ್ರೀಯ ಬೌದ್ಧ ಸಮ್ಮೇಳನಕ್ಕೆ ರಾಮಸಮುದ್ರ ನೌಕರರು 50 ಸಾವಿರ ರೂ, ದಾನ ನೀಡಿದರು.
ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಕೊಳ್ಳೇಗಾಲ ಶಾಸಕ ಹಾಗೂ ಅಂತಾರಾಷ್ಟ್ರೀಯ ಬೌದ್ಧ ಸಮ್ಮೇಳನದ ಆಚರಣಾ ಸಮಿತಿ ಅಧ್ಯಕ್ಷ ಎ.ಆರ್.ಕೃಷ್ಣಮೂರ್ತಿ ಅವರಿಗೆ ರಾಮಸಮುದ್ರ ದಿವ್ಯ ಚೇತನ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು 50 ಸಾವಿರ ರೂ, ದಾನವನ್ನು ನೀಡಿದರು.
ಈ ಸಂದರ್ಭದಲ್ಲಿ ಮೈಸೂರಿನ ಉರಿಲಿಂಗಪೆದ್ದಿ ಮಠದ ಪೀಠಾಧ್ಯಕ್ಷ ಶ್ರೀ ಜ್ಞಾನ ಪ್ರಕಾಶ ಸ್ವಾಮೀಜಿ, ಮನೋರಖ್ಖಿತ ಭಂತೇಜಿ, ದಿವ್ಯ ಚೇತನ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಪ್ರಕಾಶ್, ಉಪಾಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ಎನ್.ನಟರಾಜು, ಎಂ.ಸುಬ್ರಮಣ್ಯ, ಜಿ.ಕೆಂಪರಾಜು, ಬಿ.ರಂಗಸ್ವಾಮಿ, ನಿವೃತ್ತ ಶಿಕ್ಷಕರಾದ ರೇವಣ್ಣ, ವೆಂಕಟೇಶ್ ಹಾಗೂ ಇತರರು ಹಾಜರಿದ್ದರು.